ನಮೋ ಟೀ ಅಭಿಯಾನಕ್ಕೆ ಚಾಲನೆ
ಸಖರಾಯಪಟ್ಟಣ: ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ದೇಶದಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ನಮೋ ಟೀ ಅಭಿಯಾನಕ್ಕೆ ಸಖರಾಯಪಟ್ಟಣದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಸಿ. ಕಲ್ಮರುಡಪ್ಪ ಸಾರ್ವಜನಿಕರಿಗೆ ಉಚಿತವಾಗಿ ಟೀ ವಿತರಿಸುವ ಮುಖಾಂತರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಬ್ಬ ಸಾಮಾನ್ಯ ಚಹಾ ಮಾರುವವನು ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನಿಗಾದಿಗೆ ನರೇಂದ್ರ ಮೋದಿಯವರು ಏರುವುದನ್ನು ಟೀಕಿಸಿರುವ ಕಾಂಗ್ರೆಸ್ ನಾಯಕರ ವರ್ತನೆಯನ್ನು ಖಂಡಿಸಿದರು.
ಸ್ವಾತಂತ್ರ್ಯ ನಂತರ ಭಾರತದಲ್ಲಿ 5 ದಶಕಕ್ಕೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್ ಭ್ರಷ್ಟಚಾರ, ತುಷ್ಟೀಕರಣ, ವೋಟ್ ಬ್ಯಾಂಕ್ ರಾಜಕಾರಣದ ಮುಖಾಂತರ ದೇಶವನ್ನು ಮಾರಾಟಕ್ಕೆ ಇಟ್ಟಿರುವುದೇ ಕಾಂಗ್ರೆಸ್ ಸಾಧನೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ್ ಹುಲಿಕೆರೆ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕನಕರಾಜ್ ಅರಸ್, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್, ಸಖರಾಯಪಟ್ಟಣ ಶಕ್ತಿಕೇಂದ್ರ ಅಧ್ಯಕ್ಷ ನಾಗೇಗೌಡ, ಪ್ರಧಾನ ಕಾರ್ಯದರ್ಶಿ ಪ್ರದೀಪ್, ಸಂಘಟನಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಭರಣ್ಯ, ದಿನೇಶ್ ಪಾದಮನೆ, ಲೋಕೇಶ್, ರಾಜು, ರಮೇಶ್, ಚಿದಾನಂದ, ಸಂತೋಷ್, ಉಮೇಶ್, ತಾ.ಪಂ ಸದಸ್ಯೆ ಸುನೀತಾ ಚಿದಾನಂದ, ಮಿಥುನ್, ಕಿರಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

