ಶಿವಮೊಗ್ಗ

ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಪನ್ಯಾಸಕರ ಕೊಡುಗೆ

Published On :

ಶಿವಮೊಗ್ಗ: ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲೆಯ ಉಪನ್ಯಾಸಕರು ಕೊಡುಗೆಯೊಂದನ್ನು ನೀಡುತ್ತಿದ್ದಾರೆ.
ವಿಜ್ಞಾನ ಎಂದರೆ ಕಬ್ಬಿಣದ ಕಡಲೆ ಎಂದು ಭಾವಿಸಿದ ವಿದ್ಯಾರ್ಥಿಗಳಿಗೆಲ್ಲಾ ಅತ್ಯಂತ ಉಪಯುಕ್ತ ಎನಿಸುವ ಮತ್ತು ಮುಖ್ಯ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಹಾಗೂ ಸಶಕ್ತ ರೀತಿಯಲ್ಲಿ ಪರೀಕ್ಷೆಗೆ ತಯಾರಿ ನಡೆಸಲು, ರಾಷ್ಟ್ರೀಯ ಪಠ್ಯಕ್ರಮ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಬ್ಲೋಅಪ್ ಸಿಲಬಸ್ ಅನುಗುಣವಾಗಿ, ನಿಖರವಾದ ಉತ್ತರಸಹಿತ ಐದು ಪ್ರಶ್ನೆಪತ್ರಿಕೆಗಳ ಪುಸ್ತಕವನ್ನು ಹೊರತರಲಾಗಿದೆ.
ಶಿವಮೊಗ್ಗ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಚ್.ಇಂದುಮತಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ  ಯೋಜನೆ ಸಿದ್ಧವಾಗಿದೆ ಎಂಬುದು ಉಪನ್ಯಾಸಕರ ವಿವರಣೆ.
ಕಡಿಮೆ ದರದಲ್ಲಿ ಪೂರೈಕೆ: ವಿಜ್ಞಾನ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಅನುಭವ, ಪರಿಣತಿ ಮತ್ತು ಬದ್ಧತೆಯನ್ನು ಹೊಂದಿರುವ ಜಿಲ್ಲೆಯ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಮತ್ತು ಉಪನ್ಯಾಸಕರನ್ನೊಳಗೊಂಡ ಸಂಪನ್ಮೂಲ ವ್ಯಕ್ತಿಗಳ ಸಮಿತಿಯನ್ನು ರಚಿಸಿ ಐದು ಪ್ರಶ್ನೆಪತ್ರಿಕೆಗಳನ್ನು ಉತ್ತರಸಹಿತವಾಗಿ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಸರಬರಾಜು ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಪುಸ್ತಕಗಳನ್ನು ಬಿಡುಗಡೆ ಮಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ,  ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಪುಸ್ತಕಗಳನ್ನು ರಚಿಸಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಕಾರ್ಯಕ್ರಮವನ್ನು ಕೈಗೊಂಡ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಾಗೂ ಉಪನ್ಯಾಸಕ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು.
ನಗರದ ಶಿವಪ್ಪನಾಯಕ ವೃತ್ತದ ಬಳಿ ಇರುವ ಜೋಯ್ಸ ಬುಕ್ ಹೌಸ್ ಮತ್ತು ಪ್ರಿಂಟರ್ಸ್‌ನಲ್ಲಿ ಲಭ್ಯವಿದ್ದು, ಪ್ರತಿಗಳನ್ನು ನೇರವಾಗಿ ಅವರಿಂದ ಖರೀದಿಸಬಹುದಾಗಿದೆ. ಸಂಪರ್ಕ ಸಂಖ್ಯೆ- 9482028834, 9008706262.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.