ಪ್ಲಾಸ್ಟಿಕ್ಮುಕ್ತ ಪಟ್ಟಣವಾಗಿಸಿ
ನರಸಿಂಹರಾಜಪುರ: ಪ್ಲಾಸ್ಟಿಕ್ ಮಣ್ಣಿನಲ್ಲಿ ಕೊಳೆಯದೆ ಇರುವುದರಿಂದ ಭೂಮಿ ಹಾಗೂ ಪರಿಸರದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ಕೆ. ಉಮೇಶ್ ತಿಳಿಸಿದರು.
ಮಂಗಳವಾರ ಹಿಳುವಳ್ಳಿ ಗ್ರಾಮದ ಸರ್ಕಾರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರತಿಧ್ವನಿ ಸಂಸ್ಥೆ, ಧ.ಗ್ರಾ. ಯೋಜನೆ ಹಾಗೂ ವಿವಿಧ ಸಂಘಗಳ ಸಹಯೋಗದಲ್ಲಿ ನಡೆದ ಪ್ಲಾಸ್ಟಿಕ್ ನಿರ್ಮೂಲನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನುಷ್ಯನ ದೇಹಕ್ಕೆ ಕಾಯಿಲೆ ಬರುವಂತೆ ಭೂಮಿಗೂ ರೋಗ ಬರಲಿದೆ. ಕೊಳೆಯದ ವಸ್ತುಗಳನ್ನು ಭೂಮಿಗೆ ಹಾಕುವುದರಿಂದ ಪ್ರಕೃತಿ ಹಾಳಾಗುತ್ತದೆ. ಬೀದಿ, ಊರುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಪ್ಲಾಸ್ಟಿಕ್ಮುಕ್ತ ಪಟ್ಟಣ ಮಾಡಲು ಪಣತೊಡಬೇಕು ಎಂದು ಕರೆ ನೀಡಿದರು.
ತಹಸೀಲ್ದಾರ್ ಕೃಷ್ಣಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮದಲ್ಲಿ ಪ್ಲಾಸ್ಟಿಕ್ ನಿರ್ಮೂಲನಾ ಆಂದೋಲನ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾಗಿದೆ. ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆಯನ್ನು ಪ್ರತಿಧ್ವನಿ ಸಂಸ್ಥೆಯ ಅಧ್ಯಕ್ಷ ಪ್ರದೀಪ್ ವಹಿಸಿದ್ದರು. ಅತಿಥಿಗಳಾಗಿ ಪಟ್ಟಣ ಪಂಚಾಯಿತಿಯ ಆರೋಗ್ಯ ನಿರೀಕ್ಷಿಕ ಲಕ್ಷ್ಮಣ, ಹಿಳುವಳ್ಳಿ ಶಾಲೆಯ ಮುಖ್ಯೋಪಾಧ್ಯಾಯರಾದ ಸುಶೀಲ ಇದ್ದರು. ಪ್ರಜ್ಞಾ ಪ್ರಾರ್ಥಿಸಿದರು. ಅರುಣ್ ಸ್ವಾಗತಿಸಿದರು. ಅರ್ಚನ ನಿರೂಪಿಸಿದರು. ನಂತರ ವಿವಿಧ ಸಂಸ್ಥೆಗಳ ಕಾರ್ಯಕರ್ತರು ಹಿಳುವಳ್ಳಿ ಗ್ರಾಮದಲ್ಲಿ ಪ್ಲಾಸ್ಟಿಕ್ ಸಂಗ್ರಹಿಸುವ ಮೂಲಕ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

