ಭಕ್ತರ ಧಾರ್ಮಿಕತೆ ಹತ್ತಿಕ್ಕಬೇಡಿ: ಮಾರುತಿ ಗುರೂಜಿ
ಸಾಗರ: ಮನುಷ್ಯನ ಧಾರ್ಮಿಕತೆ ಮತ್ತು ಭಕ್ತರ ಭಾವನೆಯನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರಗಳು ನಡೆಸಬಾರದು ಎಂದು ಬಂಗಾರಮಕ್ಕಿ ಶ್ರೀ ವೀರಾಂಜನೇಯ ಕ್ಷೇತ್ರದ ಧರ್ಮದರ್ಶಿಗಳಾದ ಮಾರುತಿ ಗುರೂಜಿ ಹೇಳಿದರು.
ತಾಲೂಕಿನ ಆನಂದಪುರಂ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಂಸದರ ನಿಧಿಯಿಂದ 4 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಮುದಾಯಭವನ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಲಾನ್ಯಾಸ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮನುಷ್ಯನಿಗೆ ನೆಮ್ಮದಿ ಸಿಗುತ್ತದೆ. ಯಾರು ದೇವರು ಹಾಗೂ ಧರ್ಮವನ್ನು ಪರಿಪಾಲನೆ ಮಾಡುತ್ತಾರೋ ಅವರು ಸನ್ಮಾರ್ಗದಲ್ಲಿ ನಡೆಯುತ್ತಾರೆ. ರಾಜ್ಯದ ಗ್ರಾಮಾಂತರ ಪ್ರದೇಶದಲ್ಲಿ ಹಲವಾರು ದೇವಸ್ಥಾನಗಳು ಹಾಳುಬಿದ್ದಿವೆ. ಅಂತಹ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲರು ಕೈಜೋಡಿಸಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿದರು.
ಶ್ರೀ ವೀರಾಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಹಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಹೊಸಗುಂದ ಉಮಾಮಹೇಶ್ವರ ಸೇವಾ ಟ್ರಸ್ಟಿನ ಮುಖ್ಯಸ್ಥ ಸಿ.ಎಂ.ಎನ್. ಶಾಸ್ತ್ರಿ, ಉಪ ತಹಸೀಲ್ದಾರ್ ಪಟ್ಟರಾಜಗೌಡ, ಪ್ರಧಾನ ಅರ್ಚಕ ಶ್ರೀಧರ ಭಟ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಎ. ಶಾಂತಮ್ಮ, ಟಿ.ಎನ್. ಸುಬ್ರಾವ್, ರಾಜು ಕೆ. ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

