ಶಿವಮೊಗ್ಗ

'ಯುವಕರು ಸ್ವ ಉದ್ಯೋಗಕ್ಕೆ ಮುಂದಾಗಲಿ'

Published On :

ಶಿವಮೊಗ್ಗ: ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿ ಯುವಕ- ಯುವತಿಯರು ಸ್ವಯಂ ಉದ್ಯೋಗ ಸೃಜನೆಗಾಗಿ ಸರ್ಕಾರವು ಅನುಷ್ಠಾನಕ್ಕೆ ತರುವು ಯೋಜನೆಗಳಲ್ಲಿ ತರಬೇತಿ ಪಡೆದು, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಗೋಪಾಲ್ ಕರೆ ನೀಡಿದರು.
ನೆಹರೂ ಯುವಕೇಂದ್ರವು ಗ್ರಾಮೀಣ ಯುವಕರಿಗಾಗಿ ಏರ್ಪಡಿಸಿದ್ದ ಮೂರು ದಿನಗಳ ಯುವ ಮುಂದಾಳತ್ವ ಹಾಗೂ ಸಮುದಾಯ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವಿವಿಧ ವಿಷಯಗಳಲ್ಲಿ ತರಬೇತಿ ಪಡೆದ ವಿದ್ಯಾವಂತ ಯುವಕರು ಸಂಘಟಿತರಾಗಿ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ಯುವ ಜನರಿಗೆ ತಲುಪಿಸಬೇಕೆಂದ ಅವರು ವಿದ್ಯಾವಂತ ಯುವಕರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗದೆ ಇರುವಲ್ಲಿಯೇ ಹಸನಾದ ಬದುಕನ್ನು ರೂಪಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯಿತಿ ಯುವಜನ ನಿರ್ದೇಶಕಿ ಉಮಾ ಡಿ ಸದಾಶಿವ ಮಾತನಾಡಿ, ಸರ್ಕಾರದ ಸಂಜೀವಿನ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಮಾಡುವವರಿಗೆ ಸಹಾಯಧನವನ್ನು ನೇರವಾಗಿ ಗ್ರಾಮ ಪಂಚಾಯಿತಿ ಮೂಲಕ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಯುವ ಸಮನ್ವಯಾಧಿಕಾರಿ ಜಸಿಂತ ಡಿಸೋಜ, ಶೈಲಾ ನಾಗರಾಜ್, ಸುರೇಶ್, ಗಣ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.