ಶಿವಮೊಗ್ಗ

9ರಿಂದ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವ

Published On :

ಕ.ಪ್ರ. ವಾರ್ತೆ, ಸಾಗರ, ಫೆ.4
ಶರಾವತಿ ಹಿನ್ನೀರಿನ ಪ್ರದೇಶವಾದ ತಾಲೂಕಿನ ವಳಗರೆಯಲ್ಲಿ ಫೆ.9ರಿಂದ ಫೆ. 13ರವರೆಗೆ ಸಹಸ್ರಪಣಿ 1008 ತೀರ್ಥಂಕರ, ಚತುವರ್‌ಂಶತಿ ತೀರ್ಥಕರರು ಹಾಗೂ ಮಾನಸ್ಥಂಭೋಪರಿ ಚತುರ್ಮುಖ ಜಿನಬಿಂಬಗಳ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ವಿ.ಸಿ. ಪಾಶ್ರ್ವನಾಥ್ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಫೆ.9ರಂದು ಬೆಳಿಗ್ಗೆ 5ಕ್ಕೆ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿವಿಧಾನಗಳಿಗೆ ಹೊಂಬುಜ ಕ್ಷೇತ್ರದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮಿಗಳು ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3ಕ್ಕೆ ನಡೆಯುವ ಧಾರ್ಮಿಕ ಸಭೆಯನ್ನು ಶ್ರೀಕ್ಷೇತ್ರ ಸೋಂದಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮಿಗಳು ಉದ್ಘಾಟಿಸಲಿದ್ದು, ವಳಗೆರೆ ಕಡೇಮನೆ ಪಿ.ಪದ್ಮರಾಜಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ 7-30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು.
ಫೆ.10ರಂದು ಬೆಳಿಗ್ಗೆ 5 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 3ಕ್ಕೆ ನಡೆಯುವ ಧಾರ್ಮಿಕ ಸಭೆಯನ್ನು ಶ್ರೀಕ್ಷೇತ್ರ ಕಂಬದಹಳ್ಳಿಯ ಶ್ರೀ ಬಾನುಕೀರ್ತಿ ಭಟ್ಟಾರಕ ಸ್ವಾಮಿಗಳು ಉದ್ಘಾಟಿಸಲಿದ್ದಾರೆ. ವಿ.ಸಿ. ಪಾರ್ಶ್ವನಾಥ ವಳಗೆರೆ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯೆ ಪದ್ಮಾವತಿ, ಕೆ. ಜಯವರ್ಮರಾಜ ಬಳ್ಳಾಲ್, ತಾಪಂ ಅಧ್ಯಕ್ಷ ಹರೀಶ್ ಗಂಟೆ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಫೆ.11ರಂದು ಮಧ್ಯಾಹ್ನ 3ಕ್ಕೆ ನಡೆಯುವ ಧಾರ್ಮಿಕ ಸಭೆಯನ್ನು ಹೊಂಬುಜ ಜೈನಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮಿಗಳು ಉದ್ಘಾಟಿಸಲಿದ್ದು, ಕಡೇಮನೆ ಪಿ. ಪದ್ಮರಾಜಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಡಿ. ಸುರೇಂದ್ರಕುಮಾರ್, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಬಿ. ಯಶೋಮ್ಮ, ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಭಾಗವಹಿಸುವರು ಎಂದರು.
ಫೆ.12ರಂದು ಮಧ್ಯಾಹ್ನ 3ಕ್ಕೆ ಹೊಂಬುಜ ಶ್ರೀಗಳು ಧಾರ್ಮಿಕ ಸಭೆಯನ್ನು ಉದ್ಘಾಟಿಸಲಿದ್ದು, ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿರುವರು. ಫೆ.13ರಂದು ಮಧ್ಯಾಹ್ನ 3ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬೆಳಗಾಂನ ವಿಧಾನಸಭಾ ಸದಸ್ಯರಾದ ಸಂಜಯ ಪಾಟೀಲ್, ಶಿವಮೊಗ್ಗ ಜೈನ ಸಮಾಜದ ಅಧ್ಯಕ್ಷ ಶಿರಸಪ್ಪ ಗೋಗಿ ಉಪಸ್ಥಿತರಿದ್ದು, ವಿ. ಹೊಯ್ಸಳ ವಳಗೆರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ವಿ.ಟಿ.ಸ್ವಾಮಿ, ವಿ. ಹೊಯ್ಸಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.