ಶಿವಮೊಗ್ಗ

ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ

Published On :

ಶಿವಮೊಗ್ಗ: ಕುವೆಂಪು ವಿವಿ ಕನ್ನಡಭಾರತಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಜಿ.ಪ್ರಶಾಂತ ನಾಯಕ ಅವರನ್ನು ಫೆ.7ರಂದು ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕವಿ, ವಿಮರ್ಶಕ, ಸಂಸ್ಕೃತಿ ಚಿಂತಕರಾದ ಡಾ. ಜಿ.ಪ್ರಶಾಂತನಾಯಕ ಅವರು ಕವನ ಸಂಕಲನ, ವಿಮರ್ಶೆ ಮತ್ತು ಸಂಶೋಧನಾ ಬರಹಗಳು ಸೇರಿದಂತೆ 21 ಕೃತಿ ಪ್ರಕಟಿಸಿರುವರು. ಯಶಸ್ವಿ ಪಿಎಚ್.ಡಿ. ಮಾರ್ಗದರ್ಶಕರಾಗಿರುವರು. 21 ವರ್ಷಗಳ ಬೋಧನಾ ಅನುಭವ ಹೊಂದಿರುವ ಡಾ. ಜಿ. ಪ್ರಶಾಂತ ನಾಯಕ ಅವರು ಪ್ರಸ್ತುತ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳ ವಿಶೇಷಾಧಿಕಾರಿಗಳಾಗಿ, ಪ್ರಸಾರಾಂಗದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿರುವರು. ಅಧ್ಯಾಪಕರು ಮತ್ತು ವಿದ್ಯಾರ್ಥಿ ವೃಂದ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.