ಶಿವಮೊಗ್ಗ

ಮುಂಬಾರಿಗೆ ಪ್ರೌಢಶಾಲೆ: ಭರವಸೆ

Published On :

ಹೊಸನಗರ: ಬಹುದಿನಗಳ ಗ್ರಾಮಸ್ಥರ ಬೇಡಿಕೆಯಂತೆ ಮುಂಬಾರು ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆ ಮಂಜೂರು ಮಾಡಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭರವಸೆ ನೀಡಿದರು.
ತಾಲೂಕಿನ ಮುಂಬಾರು ಗ್ರಾಮ ಪಂಚಾಯ್ತಿ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ, ವಜ್ರಮಹೋತ್ಸವ ಸಂಭ್ರಮದಲ್ಲಿರುವ ಮುಂಬಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆ 6 ಲಕ್ಷ ಮಂಜೂರು ಮಾಡುವುದಾಗಿ ಹೇಳಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ತುರಗೋಡು ನಾಗರಾಜ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಜಿಪಂ ಸದಸ್ಯರಾದ ಕಲಗೋಡು ರತ್ನಾಕರ್, ಜ್ಯೋತಿ ಚಂದ್ರಮೌಳಿ, ತಾಪಂ ಮಾಜಿ ಅಧ್ಯಕ್ಷ ಅಬ್ಬಿ ಮಲ್ಲೇಶಪ್ಪ ಹಾಗೂ ಮುಂಬಾರು ಗ್ರಾಮ ಪಂಚಾಯ್ತಿ ಸದಸ್ಯರು ಹಾಜರಿದ್ದರು. ಲೇಖನಮೂರ್ತಿ ಸ್ವಾಗತಿಸಿದರು. ಶಾಂತಪ್ಪ ಕಾರ್ಯಕ್ರಮ ನಿರೂಪಿಸಿದರು. ಕೃಷ್ಣಮೂರ್ತಿ ವಂದಿಸಿದರು.

ಮರಕ್ಕೆ ಬಸ್ ಡಿಕ್ಕಿ: ಹಲವರಿಗೆ ಗಾಯ
ಸಾಗರ: ತಾಲೂಕಿನ ತಾಳಗುಪ್ಪ ಸಮೀಪದ ಮುಂಡಿಗೆಹಳ್ಳದಲ್ಲಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 24 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ನಂದೋಡಿಯಿಂದ ಸಾಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಂಡಿಗೆಹಳ್ಳ ಸಮೀಪ ಬಸ್ಸಿನ ಸ್ಟೇರಿಂಗ್ ಬೋಲ್ಟ್ ತುಂಡಾದ ಹಿನ್ನೆಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 24 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸ್ ಚಾಲಕ ನಾಗರಾಜ್ ಹಾಗೂ ನಿರ್ವಾಹಕ ತಾರಮೂರ್ತಿ ಅವರಿಗೆ ಸಹ ಸಣ್ಣಪುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹಾಗೂ ಉಪವಿಭಾಗಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.