ಶಿವಮೊಗ್ಗ

ಟೀ ಮಾರುತ್ತೇವೆ, 'ಕೈ'ನಂತೆ ದೇಶವನ್ನಲ್ಲ

Published On :

ಕ.ಪ್ರ.ವಾರ್ತೆ ಟಿ ಸಾಗರ ಟಿ ಫೆ.7
ಚಹಾ ಮಾರುವ ವ್ಯಕ್ತಿ ಪ್ರಧಾನಿಯೂ ಆಗಬಹುದು ಎನ್ನುವುದನ್ನು ಕಾಂಗ್ರೆಸ್ ಪಕ್ಷದವರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 100 ದಿನಗಳವರೆಗೆ ನಮೋ ಚಹ ವಿತರಿಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಡಿ.ಎಸ್.ಅರುಣ್ ತಿಳಿಸಿದರು.
ಇಲ್ಲಿನ ಯುವ ಮೋರ್ಚಾ ವತಿಯಿಂದ ಶುಕ್ರವಾರ ಸಾಗರ ಹೊಟೇಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ನಮೋ ಚಹಾ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಚಹಾ ಮಾರುತ್ತೇವೆಯೆ ವಿನಹ, ಕಾಂಗ್ರೆಸ್ ಪಕ್ಷದವರಂತೆ ದೇಶವನ್ನೇ ಮಾರುವುದಿಲ್ಲ ಎಂದರು.
ಕಾಂಗ್ರೆಸ್ ದುರಾಡಳಿತದಿಂದಾಗಿ ದೇಶವು ವಿಶ್ವಮಟ್ಟದಲ್ಲಿ ತಲೆ ತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜನರು ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯು.ಎಚ್.ರಾಮಪ್ಪ ಚಾಲನೆ ನೀಡಿದರು. ಯುವ ಮೋರ್ಚಾದ ತಾಲೂಕು ಘಟಕದ ಅಧ್ಯಕ್ಷ ರಾಜು ಮಡಿವಾಳ, ಎಲ್.ವಿ. ಅಕ್ಷರ, ಕಾರ್ಯದರ್ಶಿಗಳಾದ ಅಶೋಕ ಬೇಳೂರು, ಮಂಜುನಾಥ್ ಶೆಟ್ಟಿ, ಜಿಲ್ಲಾ ಮುಖಂಡರಾದ ಭವಾನಿರಾವ್, ಹೃಷಿಕೇಶ ಪೈ, ಸುನೀಲ್ ಫರ್ನಾಂಡೀಸ್, ಚೇತನರಾಜ್, ಸತೀಶಬಾಬು, ಸುಮನಾ ಗೋಮ್ಸ್, ಕಸ್ತೂರಿ ನಾಗರಾಜ್ ಹಾಜರಿದ್ದರು.
ಆಮ್ ಆದ್ಮಿ ಪ್ರತಿಭಟನೆ:  ಬಿಜೆಪಿ ಯುವ ಮೋರ್ಚಾ ಸಾಗರ ಹೊಟೇಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ನಮೋ ಚಹಾ ವಿತರಣೆ ಸಂದರ್ಭ ಚಹಾ ಕುಡಿದ ಪ್ಲಾಸ್ಟಿಕ್ ಲೋಟಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿರುವುದನ್ನು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿ ಕಸ ಹೊಡೆಯುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ನಿಷೇಧ ಮಾಡುವಂತೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಕೂಗು ಕೇಳಿಬರುತ್ತಿದೆ. ಇಂತಹ ಸಂದರ್ಭ ಸಾರ್ವಜನಿಕ ಸ್ಥಳಗಳಲ್ಲಿ ನಮೋ ಚಹಾ ಹೆಸರಿನಲ್ಲಿ ಬಿಜೆಪಿ ಪ್ಲಾಸ್ಟಿಕ್ ಲೋಟಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿರುವುದು ಖಂಡನೀಯ ಎಂದು ತಿಳಿಸಿದರು.
ಆಮ್ ಆದ್ಮಿ ಮುಖಂಡರಾದ ಪರಮೇಶ್ವರ ದೂಗೂರು, ಎನ್.ಡಿ. ವಸಂತಕುಮಾರ್, ಕಬಸೆ ಅಶೋಕಮೂರ್ತಿ, ಭಾರತಿ ಬೇಳೂರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.