ಶಿವಮೊಗ್ಗ

ಸಮಾಜ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ: ಸಂಸದ ರಾಘವೇಂದ್ರ

Published On :

ಕ.ಪ್ರ.ವಾರ್ತೆ ಟಿ ಸಾಗರ ಟಿ ಫೆ.7
ದುಡಿಮೆಯ ಲಾಭದ ಒಂದು ಮುಷ್ಠಿಯನ್ನು ನಾವು ಸಮಾಜದ ಅಭಿವೃದ್ಧಿಗೆ ಮೀಸಲಿಡುವ ಮೂಲಕ ಸರ್ವಾಂಗೀಣ ಪ್ರಗತಿಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕರೆ ನೀಡಿದರು.
ತಾಲೂಕು ಮಡಿವಾಳ ಮಾಚಿದೇವರ ಸಂಘ ಗುರುವಾರ ಹಮ್ಮಿಕೊಂಡಿದ್ದ ಮಡಿವಾಳ ಮಾಚಿ ದೇವರ ದೇವಾಲಯದ ಪ್ರತಿಷ್ಟಾಪನೆ ಹಾಗೂ ಮಡಿವಾಳ ಮಾಚಿದೇವರ ಅಷ್ಟಬಂಧ ಪುನರ್ ಪ್ರತಿಷ್ಟಾಪನಾ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ಸಮಾಜದಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದವರು. ಶೋಷಣೆ, ಮೂಢನಂಬಿಕೆ ವಿರುದ್ಧ ತಮ್ಮ ವಚನಗಳ ಮೂಲಕ ಜನಜಾಗೃತಿಗೆ ಪ್ರಯತ್ನಪಟ್ಟವರು. ಸಮಾಜ ಬಾಂಧವರು ಮಾಚಿದೇವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸದೃಢಗೊಳ್ಳಬೇಕು ಎಂದು ಹೇಳಿದರು.
ಶಿಕ್ಷಣ ಸಿಗಲಿ:  ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ಬಸವಣ್ಣ ಅವರ ಜೊತೆ ಸಮಾಜ ಪರಿವರ್ತನೆಗೆ ತಮ್ಮನ್ನು ತೊಡಗಿಸಿಕೊಂಡವರು. ಅಂದಿನ ದಾರ್ಶನಿಕರು ನಮಗೆ ಹಾಕಿಕೊಟ್ಟ ಸನ್ಮಾರ್ಗವನ್ನು ನಾವು ಇಂದಿಗೂ ಅನುಸರಿಸುತ್ತಿಲ್ಲ. ಸಮಾಜ ಪ್ರಗತಿ ಹೊಂದಬೇಕಾದರೆ ಶಿಕ್ಷಣ ಪ್ರಮುಖವಾಗಿ ಸಿಗಬೇಕು. ಯಾವ ಸಮಾಜ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುತ್ತದೆಯೋ, ಆಗ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಊರು ಅಭಿವೃದ್ಧಿ ಆಗಬೇಕಾದರೆ ಶಾಲೆ, ದೇವಸ್ಥಾನ ಎರಡೂ ಇರಬೇಕಾಗುತ್ತದೆ. ಶ್ರಮಿಕವರ್ಗವಾಗಿರುವ ಮಡಿವಾಳ ಸಮಾಜ ದುಡಿಮೆಯ ಜೊತೆಗೆ ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಿಕೊಂಡಿರುವುದು ಗಮನಾರ್ಹ ಎಂದರು.
ಮೂಡಬಿದರೆ ಶ್ರೀಕ್ಷೇತ್ರ ಕರಂಜೆಮಠದ ಶ್ರೀಮುಕ್ತಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ಎಂ.ಎಸ್. ಕೊಟ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯರಾದ ಎನ್.ಲಲಿತಮ್ಮ, ಸುಂದರಸಿಂಗ್, ಆರ್.ಶ್ರೀನಿವಾಸ್, ನಾಗರತ್ನ ಸಿ., ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಸದಸ್ಯ ಸತೀಶಬಾಬು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.