'ಗೋರಖ್ ಸಿಂಗ್ ವರದಿ ಜಾರಿಗೊಳಿಸಿ'
ಸಾಗರ: ಪಟ್ಟಣದಲ್ಲಿ ಸೋಮವಾರ ನಡೆಯಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಭಾನುವಾರ ಪ್ರವಾಸಿ ಮಂದಿರದಲ್ಲಿ ಮುಖಂಡರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋರಖ್ ಸಿಂಗ್ ವರದಿ ಕಡ್ಡಾಯವಾಗಿ ಜಾರಿಯಾಗಬೇಕು. ಅಡಕೆ ಬೆಳೆಗಾರರ ಸಂಕಷ್ಟ ನನಗೆ ತಿಳಿದಿದೆ. ಮಲೆನಾಡಿಗರ ಜೀವನಾಡಿಯಾದ ಅಡಕೆ ಬೆಳೆಗೆ ಪುನಶ್ಚೇತನ ನೀಡಬೇಕಾದದ್ದು ನಮ್ಮ ಜವಾಬ್ದಾರಿ ಎಂದರು.
ಜನರು ಸರ್ಕಾರದ ಮೇಲೆ ಸಾಕಷ್ಟು ನಿರೀಕ್ಷೆಯಿಟ್ಟಿದ್ದರು. ಪ್ರಗತಿ ಶೂನ್ಯವಾಗಿದೆ. ಸಚಿವರು ಕಚೇರಿಗೇ ಹೋಗುವುದಿಲ್ಲ. 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಯಾವುದೆ ಪ್ರಗತಿಯಾಗಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ತುಮರಿ ಸೇತುವೆ ನಿರ್ಮಾಣಕ್ಕೆ ಬಜೆಟ್ನಲ್ಲಿ ಸೇರಿಸಿ ಘೋಷಿಸಿದ್ದೆ. ಈಗಿಸಿ ಸರ್ಕಾರ ಇಲ್ಲಿಯವರೆಗೂ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರ ಸಹಕಾರದಿಂದ ಸೇತುವೆ ನಿರ್ಮಾಣಕ್ಕೆ ಸರ್ಕಾರವನ್ನು ಒತ್ತಾಯಿಸುತ್ತೇವೆ. ರಾಜ್ಯದ ಜನತೆಗೆ ವಿದ್ಯುತ್ ನೀಡಿದ ಜನರ ತ್ಯಾಗಕ್ಕೆ ಕವಡೆ ಕಿಮ್ಮತ್ತಿನ ಬೆಲೆಯನ್ನೂ ಸರ್ಕಾರ ನೀಡುತ್ತಿಲ್ಲ, ಹೀಗೇ ಮುಂದುವರಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗಂಗಾಕಲ್ಯಾಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬ ಫಲಾನುಭವಿಗೂ ಸರ್ಕಾರ ಇಲ್ಲಿಯವರೆಗೂ ಸಹಕಾರ ನೀಡಿದ ಉದಾಹರಣೆ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ಬಗ್ಗೆ ನನಗೆ ಗೌರವವಿದೆ. ಆದರೆ, ಜಿಲ್ಲೆಯ ಶಾಸಕರನ್ನೆಲ್ಲಾ ಸೇರಿಸಿ ಪ್ರಗತಿಗೆ ಸಂಬಂಧಪಟ್ಟಂತೆ ಒಂದೇ ಒಂದು ಸಭೆಯನ್ನೂ ಮಾಡಿಲ್ಲ. ಅಡಕೆ ಬೆಳೆಗಾರರ ಸಾಲ ಮನ್ನಾ ಆಗಬೇಕು. ಜನರ ಸಂಕಷ್ಟಗಳಿಗೆ ಸ್ಪಂದಿಸದೇ ಇರುವ ಸರ್ಕಾರ ಇದ್ದಾದರೂ ಏನು ಪ್ರಯೋಜನ ಎಂದರು.
ಮಾಜಿ ಸಚಿವ ಹರತಾಳು ಹಾಲಪ್ಪ, ಬಿ.ಆರ್.ಜಯಂತ್, ಯು.ಎಚ್. ರಾಮಪ್ಪ, ಚೇತನ್ರಾಜ್, ಶರಾವತಿ ಸಿ.ರಾವ್. ಟಿ.ಡಿ.ಮೇಘರಾಜ್, ರಾಜು ಬಿ. ಮಡಿವಾಳ, ರವೀಶಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

