ಶೂನ್ಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಪರಿಶೀಲನೆ
ಸಾಗರ: ಪಟ್ಟಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶೂನ್ಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗುತ್ತಿದೆ. ಈಗಾಗಲೆ 28ನೇ ವಾರ್ಡ್ನಲ್ಲಿ ಘಟಕದ ಕಾಮಗಾರಿ ಮುಗಿದಿದ್ದು, 31ನೇ ವಾರ್ಡ್ ನಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.
ಇಲ್ಲಿನ ನಗರಸಭೆ ವತಿಯಿಂದ 31ನೇ ವಾರ್ಡ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶೂನ್ಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯಡಿ ಈಗಾಗಲೆ 15 ಕೋಟಿ ರೂ. ಹಣ ಬಂದಿದ್ದು, ಕಾಮಗಾರಿ ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಶಿವಪ್ಪನಾಯಕ ವೃತ್ತ, ಪೊಲೀಸ್ ಠಾಣೆ ವೃತ್ತ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗಿದೆ. ನಗರವನ್ನು ಮಾದರಿಯಾಗಿ ನಿರ್ಮಿಸುವ ನಿಟ್ಟಿನಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ ಸದ್ಯದಲ್ಲಿಯೆ ಕೈಗೆತ್ತಿಕೊಳ್ಳಲಾಗುವುದು ಎಂದರು.
ಆಶ್ರಯ ನಿವೇಶನ: ನಗರವ್ಯಾಪ್ತಿಯಲ್ಲಿ ಈಗಾಗಲೆ ಆಶ್ರಯ ನಿವೇಶನ ಕೋರಿ ಏಳು ಸಾವಿರ ಅರ್ಜಿಗಳು ಬಂದಿವೆ. ಅವುಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, 1430 ಅರ್ಜಿಗಳನ್ನು ಗುರುತಿಸಲಾಗಿದ್ದು, ಸದ್ಯದಲ್ಲಿ ಅವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು. ಮಾರಿಕಾಂಬಾ ಜಾತ್ರೆ ಅಂಗವಾಗಿ 5 ಕೋಟಿ ರು. ಬಿಡುಗಡೆಯಾಗಿದೆ. ಅಲ್ಲದೆ ಕೃಷಿ ಮಾರುಕಟ್ಟೆ ವತಿಯಿಂದ ಸಂತೆ ಮೈದಾನ ನಿರ್ಮಾಣಕ್ಕೆ ಈಗಾಗಲೆ 2 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದರು.
ನಗರಸಭೆ ಪೌರಾಯುಕ್ತ ಚಂದ್ರಶೇಖರ್ ಮಾತನಾಡಿ, ಮಾರಿಜಾತ್ರೆ ಬರುತ್ತಿರುವುದರಿಂದ ನಗರದಲ್ಲಿ ಸ್ವಚ್ಚತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ. ಜಾತ್ರೆ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೆ ವ್ಯತ್ಯಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರಸಭೆ ಸದಸ್ಯರಾದ ತೀ.ನ.ಶ್ರೀನಿವಾಸ್, ಗಣಾಧೀಶ್, ಜಿ.ಕೆ.ಭೈರಪ್ಪ ಇನ್ನಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

