ಇಂದಿನಿಂದ 5 ದಿನಗಳ ವಿಚಾರ ಕಮ್ಮಟ
ಶಿವಮೊಗ್ಗ: ದೇವರಾಜ ಅರಸು ಸಂಶೋಧನಾ ಸಂಸ್ಥೆಯು ಫೆ.11 ರಿಂದ 15 ರವರೆಗೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ದೇವರಾಜ ಅರಸು ಭವನದಲ್ಲಿ ವಿಚಾರ ಕಮ್ಮಟ ಹಮ್ಮಿಕೊಂಡಿದೆ.
ಹಿಂದುಳಿದ ವರ್ಗಗಳ ಸಾಮಾಜಿಕ ಸಂಚಲನೆ ಹಾಗೂ ಸೌಲಭ್ಯ ಕುರಿತಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗಾಗಿ ಈ ಕಮ್ಮಟದಲ್ಲಿ ನಡೆಯುತ್ತಿದೆ. ಕುಲಪತಿ ಪ್ರೊ. ಎಸ್.ಎ. ಬಾರಿ 11 ರಂದು ಬೆಳಗ್ಗೆ 10 ಗಂಟೆಗೆ ಕಮ್ಮಟಕ್ಕೆ ಚಾಲನೆ ನೀಡಲಿದ್ದಾರೆ. ಬಿ.ಸ್ವಾಮಿರಾಲ್ ಆಶಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಸರ್ಕಾರದ ಕಾರ್ಯದರ್ಶಿ ಕೆ.ಆರ್.ನಿರಂಜನ, ಆಯುಕ್ತ ಆರ್.ಶಾಂತರಾಜ್, ಡಿಸಿ ವಿಪುಲ್ ಬನ್ಸಲ್ ಪಾಲ್ಗೊಳ್ಳುವರು. ಸಂಸ್ಥೆಯ ನಿರ್ದೇಶಕರಾದ ಡಾ. ಆರ್.ಅನುರಾಧ ಪಟೇಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿಂದುಳಿದ ವರ್ಗಗಳು ಮತ್ತು ಅವುಗಳ ಸಾಮಾಜಿಕ ಸ್ಥಿತಿ, ಮೀಸಲಾತಿ, ಮಹಿಳಾ ಸಂಕಥನ, ಸಾಮಾಜಿಕ ಸಂಪನ್ಮೂಲ, ಸವಾಲುಗಳು, ಸೌಲಭ್ಯಗಳು, ಅಸ್ತಿತ್ವ ವಿಚಾರವಾಗಿ ವಿವಿಧ ಗೋಷ್ಠಿಗಳು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

