ಜಿಲ್ಲಾ ಕೇಂದ್ರದಲ್ಲಿ ಡಿಜಿಟಲ್ ಗ್ರಂಥಾಲಯ
ನೂತನ ವಿಸ್ತರಣಾ ಕಟ್ಟಡ ಉದ್ಘಾಟಿಸಿ ಸಚಿವ ಕಿಮ್ಮನೆ ರತ್ನಾಕರ್ ಭರವಸೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಫೆ.10 ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭಿಸುವ ಭರವಸೆಯನ್ನು ಗ್ರಂಥಾಲಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ನೀಡಿದ್ದಾರೆ.
ನಗರದಲ್ಲಿ ಸೋಮವಾರ ಅವರು ಜಿಲ್ಲಾ ಕೇಂದ್ರ ಗ್ರಂಥಾಲಯದ ನೂತನ ವಿಸ್ತರಣಾ ಕಟ್ಟಡ ಉದ್ಘಾಟಿಸಿ, ತೀರ್ಥಹಳ್ಳಿ ತಾಲೂಕಿನಲ್ಲಿ ಕುವೆಂಪು ಅವರು ಓದಿದ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭಿಸುತ್ತಿದ್ದೇವೆ. ಇದೇ ರೀತಿ ಜಿಲ್ಲಾ ಕೇಂದ್ರದಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ರಂಥಾಲಯ ಆರಂಭಿಸುವುದಕ್ಕಿಂತ ಮುಖ್ಯವಾಗಿ ಇವುಗಳನ್ನು ಹೆಚ್ಚು ಬಳಸಿಕೊಳ್ಳಬೇಕು. ಸಾರ್ವಜನಿಕರು ಇತ್ತ ಆಗಮಿಸಬೇಕು. ಮುಖ್ಯವಾಗಿ ಗ್ರಂಥಾಲಯ ಇಲಾಖೆ ಸಿಬ್ಬಂದಿ ಇಲ್ಲಿರುವ ಪುಸ್ತಕಗಳನ್ನು ಓದಬೇಕು ಎಂದರು.
ಲೋಹಿಯಾ ಅವರನ್ನು ಓದಿದ್ದ ನಾನು ಮೊದಮೊದಲು ನೆಹರೂ ಅವರನ್ನು ಒಪ್ಪುತ್ತಿರಲಿಲ್ಲ. ಯಾವಾಗ ನೆಹರೂ ಅವರ ಆತ್ಮಕತೆ ಓದಿದೆನೋ ಆಗಿಂದ ನನ್ನ ಅಭಿಪ್ರಾಯ ಬದಲಾಯಿತು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾ ಕೇಂದ್ರದಲ್ಲಿ ಇನ್ನೂ ನಾಲ್ಕೈದು ಗ್ರಂಥಾಲಯ ಆರಂಭಿಸುವ ಅವಶ್ಯಕತೆ ಇದೆ. ಈ ಬಗ್ಗೆ ಸಚಿವರು ಕ್ರಮ ಕೈಗೊಳ್ಳಬೇಕು ಎಂದರು.
ನಗರ ಪಾಲಿಕೆ ಸದಸ್ಯ ಐಡಿಯಲ್ ಗೋಪಿ, ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಓದುವವರಿಗೆ ಪ್ರತ್ಯೇಕ ವ್ಯವಸ್ಥೆ ಆಗಬೇಕು. ವಾಚನಾಲಯಕ್ಕೆ ಇನ್ನಷ್ಟು ಸೌಕರ್ಯ ಬೇಕು ಎಂದರು.
ಗ್ರಂಥಾಲಯ ಇಲಾಖೆ ನಿರ್ದೇಶಕ ಎಂ.ಎಂ. ಬಡ್ನಿ, ಉಪನಿರ್ದೇಶಕ ಹಾವಣ್ಣವರ, ಕುವೆಂಪು ವಿವಿ ಗ್ರಂಥಾಲಯ ಅಧಿಕಾರಿ ಪದ್ಮಮ್ಮ ಇದ್ದರು. ಇಲಾಖೆ ಉಪನಿರ್ದೇಶಕ ಬಿ. ಚಂದ್ರೇಗೌಡ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

