ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ನೌಕರರ ಮುಷ್ಕರ
ಕ.ಪ್ರ.ವಾರ್ತೆ, ಶಿವಮೊಗ್ಗ, ಫೆ.10
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಸೋಮವಾರ ಮುಷ್ಕರ ನಡೆಸಿದರು.
ಇಲ್ಲಿನ ಕೆನರಾ ಬ್ಯಾಂಕ್ ಹಾಗೂ ಎಸ್ಬಿಎಂ ಮುಖ್ಯ ಶಾಖೆ ಮುಂಭಾಗ ಧರಣಿ ನಡೆಸಿದ ಬ್ಯಾಂಕ್ ನೌಕರರು ಘೋಷಣೆ ಕೂಗಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಸರ್ಕಾರದ ಬ್ಯಾಂಕಿಂಗ್ ಸುಧಾರಣಾ ನೀತಿಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾನಿರತರು, ಹೊಸ ಖಾಸಗಿ ಬ್ಯಾಂಕ್ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದರು. ಹಾಗೆಯೇ ಎಲ್ಲಾ ಖಾಸಗಿ ಬ್ಯಾಂಕ್ಗಳನ್ನು ರಾಷ್ಟ್ರೀಕರಣ ಮಾಡುವಂತೆ ಒತ್ತಾಯಿಸಿದರು. ದ್ವಿಪಕ್ಷೀಯ ಒಪ್ಪಂದದಂತೆ ತಕ್ಷಣ ವೇತನ ಪರಿಷ್ಕರಣೆ ಮಾಡುವಂತೆಯೂ ಆಗ್ರಹಿಸಿದರು.
ನಗರದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಸೋಮವಾರ ಬಾಗಿಲು ಮುಚ್ಚಿದ್ದು, ಮಂಗಳವಾರ ಸಹ ಮುಷ್ಕರ ಮುಂದುವರಿಯಲಿದೆ.
ಪ್ರತಿಭಟನೆಯಿಂದಾಗಿ ಗ್ರಾಹಕರು ವ್ಯವಹಾರ ನಡೆಸದೇ ತೊಂದರೆ ಅನುಭವಿಸಿದರು. ಎಸ್ಬಿಎಂ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಬ್ಯಾಂಕ್ ನೌಕರರ ಒಕ್ಕೂಟದ ಪ್ರಮುಖರಾದ ವಿನೋದೆ ಪೈ, ಹಿರಣ್ಣಯ್ಯ, ರವಿ ಕುಮಾರ್, ಜಗೀದೀಶ್ ಮೊದಲಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

