ಶಿವಮೊಗ್ಗ

ನಿವೇಶನ ಹಂಚಿಕೆಯಲ್ಲಿ ಅಕ್ರಮ: ತನಿಖೆಗೆ ಒತ್ತಾಯ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಫೆ.11
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ. ಪ್ರಕರಣವನ್ನು ಲೋಕಾಯುಕ್ತಕ್ಕೆ ಅಥವಾ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗವು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.
ಇಡೀ ಪ್ರಕರಣದ ತನಿಖೆ ನಡೆಸಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಈ ಸಂದರ್ಭ ಅಧ್ಯಕ್ಷರಾಗಿದ್ದ ಜ್ಞಾನೇಶ್ವರ, ದತ್ತಾತ್ರಿ ಹಾಗೂ ಆಯುಕ್ತರನ್ನು ತನಿಖೆಗೊಳಪಡಿಸಬೇಕು ಎಂದು ಅವರು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
600 ಕೋಟಿ ಅವ್ಯವಹಾರ:  ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಹರಾಜು ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭ ಸಾರ್ವಜನಿಕರ ಎದುರು ಬೆಲೆ ಕೂಗಿ ನಿಗದಪಡಿಸಲಾಯಿತು. ನಂತರ ತಮಗೆ ಇಷ್ಟ ಬಂದಂತೆ ಕಡಿಮೆ ಮಾಡಿ ಭ್ರಷ್ಟಾಚಾರ ಎಸಗಲಾಗಿದೆ. ಈ ರೀತಿ 7 ವರ್ಷದಲ್ಲಿ 600 ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.
ಕಡಿಮೆ ಹಣಕ್ಕೆ ನೋಂದಣಿ:  ಪ್ರಾಧಿಕಾರವು ರೈತರಿಂದ ಜಮೀನು ವಶಪಡಿಸಿಕೊಂಡ ನಂತರ ಜಮೀನು ಮಾಲೀಕರಿಗೆ ಪರಿಹಾರ ನೀಡು ಬದಲು ಅಭಿವೃದ್ಧಿಪಡಿಸಿದ ಬಡಾವಣೆಯಲ್ಲಿ ಎಕರೆಗೆ ಇಂತಿಷ್ಟು ಸೈಟು ನೀಡಿ ರೈತನ ಕಷ್ಟದ ಪರಿಸ್ಥಿತಿ ದುರುಪಯೋಗ ಮಾಡಿಕೊಂಡು, ನಂತರ ಕಡಿಮೆ ಹಣಕ್ಕೆ ಈ ನಿವೇಶನಗಳನ್ನು ತಮ್ಮ ಕುಟುಂಬದವರ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳಲಾಗಿದೆ ಎಂದು ದೂರಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಡಳಿತ ನಡೆಸಿದ ಅಧ್ಯಕ್ಷರು ಹಾಗೂ ಸದಸ್ಯರು ಈ ರೀತಿ ಭಾರಿ ಅಕ್ರಮ ಎಸಗಿದ್ದು, ಅವರೊಂದಿಗೆ ಪ್ರಾಧಿಕಾರದ ಸಿಬ್ಬಂದಿ ಸಹ ಶಾಮೀಲಾಗಿದ್ದಾರೆ. ಒಬ್ಬ 3ನೇ ದರ್ಜೆ ನೌಕರ ಸಹ ತನ್ನ ಕುಟುಂಬದ ಸದಸ್ಯರ ಹೆಸರಿನಲ್ಲಿ ನಾಲ್ಕೈದು ನಿವೇಶನ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಪ್ರಾಧಿಕಾರವು ಬಡಾವಣೆ ನಿರ್ಮಿಸುವ ಸಂದರ್ಭದಲ್ಲಿ ನಕಾಶೆಯಲ್ಲಿದ್ದ ದೊಡ್ಡ ಕೆರೆಗಳು, ಸಣ್ಣ ಕೆರೆಗಳು, ಹಳ್ಳಗಳನ್ನು ಒತ್ತುವರಿ ಮಾಡಲಾಗಿದೆ. ನಿವೇಶನ ಪಡೆದವರು ತಮ್ಮ ಬಳಿ ಯಾವುದೇ ನಿವೇಶನ ಇಲ್ಲ ಪ್ರಮಾಣ ಪತ್ರ ಸಲ್ಲಿಸಬೇಕು.
 ಇದಕ್ಕೆ ಕಿಂಚಿತ್ತೂ ಗೌರವ ಕೊಡದೇ ಮೋಸ ಮಾಡಲಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕೆ.ದೇವೇಂದ್ರಪ್ಪ, ಮಧುಸೂದನ್, ಆರ್.ರಂಗನಾಥ್, ಎಸ್.ಟಿ. ಚಂದ್ರಶೇಖರ್, ಶ್ರೀನಿವಾಸ್, ಸ್ಟೆಲ್ಲಾ ಮಾರ್ಟಿನ್, ಶೀಲಾ, ಗುಲಾಬೀ ಮುಜೀಬುಲ್ಲಾ, ಚೇತನ್, ವಿನಯ್, ಶ್ರೀಜಿತ್ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.