ಕೊಡಚಾದ್ರಿ ಕಪ್:19ರಿಂದ 3ನೇ ಹಂತದ ವಾಲಿಬಾಲ್ ಲೀಗ್
ತೀರ್ಥಹಳ್ಳಿ: ಕರ್ನಾಟಕ ವಾಲಿಲೀಗ್ (ಕೆ.ವಿ.ಎಲ್.) 5 ದಿನಗಳ ವಾಲಿಬಾಲ್ ಲೀಗ್ ಪಂದ್ಯಾವಳಿ ಫೆ.19 ರಿಂದ 23 ರವರೆಗೆ ತೀರ್ಥಹಳ್ಳಿಯಲ್ಲಿ ನಡೆಯಲಿದ್ದು, ಇದನ್ನು ಕೊಡಚಾದ್ರಿ ಕಪ್ ಹೆಸರಿನಲ್ಲಿ ನಡೆಸಲಾಗುತ್ತಿದೆ ಎಂದು ಕೊಡಚಾದ್ರಿ ಕಪ್ ಗೌರವಾಧ್ಯಕ್ಷ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಷ್ಟ್ರದಲ್ಲಿ ಪ್ರತಿಷ್ಠಿತ ಪಂದ್ಯಾವಳಿಗಳಲ್ಲಿ ಒಂದಾಗಿರುವ ಈ ಪಂದ್ಯಾವಳಿಯ 3ನೇ ಹಂತದ ಆಟ ತೀರ್ಥಹಳ್ಳಿಯಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ರಾಷ್ಟ್ರೀಯ ತಂಡದ ಕ್ಯಾಪ್ಟನ್ ಗುರುವಿಂದರ್ ಸಿಂಗ್, ವಿಕ್ರಂ ಮೊದಲಾದರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಈ ಪಂದ್ಯಾವಳಿ 5 ದಿನ ನಡೆಯಲಿದ್ದು, ಪ್ರತಿ ದಿನ ಸಂಜೆ 5 ಗಂಟೆಗೆ ಪ್ರಾರಂಭವಾಗಲಿದೆ. ಕೊಡಚಾದ್ರಿ ಬಳಗದ ಕೊಡಚಾದ್ರಿ ಜನ ವೇದಿಕೆ ಮುಖ್ಯ ಪ್ರಾಯೋಜಕರಾಗಿ ಈ ಪಂದ್ಯಾವಳಿಯ ಜವಾಬ್ದಾರಿ ಹೊತ್ತಿದೆ. ಕರ್ನಾಟಕ ರಾಜ್ಯ ಮತ್ತು ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆ, ವಿಶಾ ಸ್ಫೋರ್ಟ್, ಏಕಲವ್ಯ ಸ್ಫೋರ್ಟ್ ಕ್ಲಬ್, ಸಿಟಿ ಕ್ರಿಕೆಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಪಂದ್ಯಾವಳಿ ನಡೆಯಲಿದೆ.
ಉದ್ಘಾಟನೆ: ಫೆ.19 ಬುಧವಾರ ಸಂಜೆ ಪಂದ್ಯಾವಳಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೊಡಚಾದ್ರಿ ಜನವೇದಿಕೆ ಅಧ್ಯಕ್ಷ ಶಚೀಂದ್ರ ಹೆಗ್ಡೆ ಅಧ್ಯಕ್ಷತೆ ವಹಿಸುವರು. ಆರ್.ಎಂ. ಮಂಜುನಾಥ ಗೌಡ ಉದ್ಘಾಟಿಸುವರು. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಮಧು ಬಂಗಾರಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ್, ರಾಜ್ಯ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಲೋಕೇಶ್ ಗೌಡ, ಖಜಾಂಚಿ ಚೌಹಾಣ್, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮೊದಲಾದವರು ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

