ಶಿವಮೊಗ್ಗ

ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆ ನಾಟ ವಶ

Published On :

ತ್ಯಾಗರ್ತಿ: ಸಾಗರ ತಾಲೂಕಿನ ಗೌತಮಪುರ ಬಳಿ ಮಾರುತಿ ಕಾರಿನಲ್ಲಿ ಅಕ್ರಮವಾಗಿ ಬೀಟೆ ಮರ ಸಾಗಿಸುತ್ತಿದ್ದವರ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ವಾಹನ ಸಹಿತ ಬೀಟೆ ಮರವನ್ನು ವಶಪಡಿಸಿಕೊಂಡಿದ್ದಾರೆ.
ಸೋಮವಾರ ನಸುಕಿನಲ್ಲಿ ಈ ಘಟನೆ ನಡೆದಿದ್ದು, ಆನಂದಪುರ-ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ಗೌತಮಪುರ ಗ್ರಾಮದ ಅರಳಿಕಟ್ಟೆ ಹತ್ತಿರ ಬೀಟೆ ನಾಟಾಗಳ ಅಕ್ರಮ ಸಾಗಾಣಿಕೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಗ್ರಾಮಸ್ಥರಿಂದ ಖಚಿತ ಸುಳಿವು ದೊರೆತ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ವಶಕ್ಕೆ ಪಡೆದುಕೊಂಡ ನಾಟದ ಮೌಲ್ಯ ಒಂದು ಲಕ್ಷ ರುಪಾಯಿ ಎಂದು ಅಂದಾಜಿಸಲಾಗಿದೆ. ಚೋರಡಿ ವಲಯ ಅರಣ್ಯಾಧಿಕಾರಿ ಕೆ.ರವಿಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಎಂ.ಜೇಂದ್ರನಾಯ್ಕ, ದೇವ, ಅರಣ್ಯ ರಕ್ಷಕ ಕೆ.ಶಿವರಾಜು, ಮಲ್ಲಿಗನಾಥ ಹಾಗೂ ವಾಹನ ಚಾಲಕ ರಫೀಕ್ ಪಾಲ್ಗೊಂಡಿದ್ದರು.
25 ಕುರಿ ಕಳವು
ಭದ್ರಾವತಿ: ಪಟ್ಟಣದ ಹೊರವಲಯದ ಶಿವರಾಮನಗರದ ನಿಂಗಯ್ಯ ಎಂಬವರ ದೊಡ್ಡಿಯಲ್ಲಿದ್ದ 25 ಕುರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ನಿಂಗಯ್ಯ ನ್ಯೂ ಟೌನ್ ಪೊಲೀಸರಿಗೆ ದೂರು ನೀಡಿದ್ದಾರೆ. ಕುರಿಗಳ ಮೌಲ್ಯ ಸುಮಾರು 48,500 ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.