ಶಿವಮೊಗ್ಗ

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಸೌಲಭ್ಯ ಕಲ್ಪಿಸಿಲ್ಲ: ಆರೋಪ

Published On :

ಕ.ಪ್ರ.ವಾರ್ತೆ, ಸಾಗರ, ಫೆ.17
ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ತನ್ನ ಮತಬ್ಯಾಂಕ್ ಆಗಿ ಇರಿಸಿಕೊಂಡು ಹಿಂದಿನಿಂದಲೂ ಚುನಾವಣೆ ಗೆಲ್ಲುತ್ತಿದೆಯೆ ವಿನಃ ಅವರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈತನಕ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಬಿಜೆಪಿ ನಗರ ಅಲ್ಪಸಂಖ್ಯಾತ ಮೋರ್ಚದ ಅಧ್ಯಕ್ಷ ಮರಿದಾಸ್ ಹೇಳಿದರು.
 ಆದರೆ ಕೇಂದ್ರದಲ್ಲಿ ಆಡಳಿತ ನಡೆಸಿದ ವಾಜಪೇಯಿ ಹಾಗೂ ರಾಜ್ಯದಲ್ಲಿ ಐದು ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು, ಅದು ಆಯಾ ವರ್ಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನ ಮಾಡಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಜೆಪಿ ನೆರವು: ಹಿಂದಿನ ಬಿಜೆಪಿ ಸರ್ಕಾರ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ 224.15 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಕೇವಲ 100 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ವಕ್ಫ್ ಬೋರ್ಡ್‌ಗೆ ಹಿಂದಿನ ಬಿಜೆಪಿ ಸರ್ಕಾರ 150 ಕೋಟಿ ರೂ. ಬಿಡುಗಡೆ ಮಾಡಿದ್ದರೆ, ಕಾಂಗ್ರೆಸ್ ಸರ್ಕಾರ ಕೇವಲ 45 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇದರ ಜೊತೆಗೆ ಬೆಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 50 ಕೋಟಿ ರೂ. ನೀಡಿತ್ತು ಎಂದು ತಿಳಿಸಿದರು.
 ಬಿಜೆಪಿ ಅಧಿಕಾರ ಅವಧಿಯಲ್ಲಿ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿಗೆ ರಾಜ್ಯಮಟ್ಟದ ಸಮಿತಿ ರಚಿಸಿ 50 ಕೋಟಿ ರೂ. ಅನುದಾನ ನೀಡಿತ್ತು. ಕಾಂಗ್ರೆಸ್ಸ್‌ರ್ಕಾರ ಅಧಿಕಾರಕ್ಕೆ ಬಂದು ಹತ್ತು ತಿಂಗಳಾಗುತ್ತಾ ಬಂದಿದ್ದರೂ ಈತನಕ ಯಾವುದೆ ಸಭೆಯನ್ನು ಕರೆಯದೆ ಕ್ರಿಶ್ಚಿಯನ್ ಸಮುದಾಯವನ್ನು ಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ದೂರಿದರು.
 ಬಿಜೆಪಿ ಅಲ್ಪಸಂಖ್ಯಾತ ಮೋರ್ಚದ ರಾಜ್ಯ ಕಾರ್ಯದರ್ಶಿ ಸುಮನಾ ಗೋಮ್ಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಫರ್ನಾಂಡಿಸ್, ಪ್ರಮುಖರಾದ ಆಸೀಫ್, ಸತೀಶಬಾಬು, ರವೀಶ್ ಕುಮಾರ್, ಡೆನ್ನಿಸ್, ನಗರಸಭೆ ಸದಸ್ಯರಾದ ಸಂತೋಷ್ ಶೇಟ್, ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.