ಶಿವಮೊಗ್ಗ

ಯುವ ಕಾಂಗ್ರೆಸ್ ಸದಸ್ಯತ್ವ ಕಾರ್ಡ್ ವಿತರಣೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಫೆ.17
ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಸದಸ್ಯತ್ವ ಪಡೆದ ಯುವ ಕಾರ್ಯಕರ್ತರಿಗೆ ಸೋಮವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್  ಗುರುತಿನ ಚೀಟಿ ನೀಡುವ ಮೂಲಕ ಕಾರ್ಡ್ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದರು.
 ನಂತರ ಮಾತನಾಡಿದ ಅವರು, ಈ ದೇಶದ ಶಕ್ತಿಯೇ ಯುವಕರು-ಯುವತಿಯರು. ಸ್ವಚ್ಛ ಸಮಾಜ ನಿರ್ಮಾಣಕ್ಕಾಗಿ ದೇಶದ ಪ್ರಗತಿಗೆ ಯುವಕರ ಪಾತ್ರ ಮುಖ್ಯ. ಇಂದು ಗುರುತಿನ ಚೀಟಿ ಪಡೆದ ಯುವಕರು ಪಕ್ಷದ ಸಂಘಟನೆಗೆ, ನ್ಯಾಯಪರ ಹೋರಾಟ ನಡೆಸಬೇಕು. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಿಳಿಸಬೇಕೆಂದರು.  ಈ ಸಂದರ್ಭದಲ್ಲಿ ಲೋಕಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಪ್ರವೀಣ್ ಕುಮಾರ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಟಿ.ವಿ.ರಂಜಿತ್ ಇದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಹಾಲಪ್ಪ, ಯುವ ಮುಖಂಡ ಕೆ.ರಂಗನಾಥ್, ಪದಾಧಿಕಾರಿಗಳಾದ ಮೊಹಮ್ಮದ್ ಆರೀಫ್, ಎಚ್.ಪಿ.ಗಿರೀಶ್, ಆರ್.ಕಿರಣ್, ಲೋಕೇಶ್, ಶಿವಮೂರ್ತಿ, ಶರತ್, ಪೈರೋಜ್, ಶಿವರಾಜ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.