'ಜೆಡಿಎಸ್ನಿಂದ ಬಂಗಾರಪ್ಪ ಕುಟುಂಬದವರೇ ಅಭ್ಯರ್ಥಿ'
ಕ.ಪ್ರ. ವಾರ್ತೆ ಶಿವಮೊಗ್ಗ ಫೆ.18
ಜಾತ್ಯತೀತ ಜನತಾದಳದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಂಗಾರಪ್ಪ ಅವರ ಕುಟುಂಬದವರೇ. ಮಾರ್ಚ್ ಎರಡನೇ ವಾರ ಶಿವಮೊಗ್ಗದಲ್ಲಿ ನಡೆಯಲಿರುವ ಪಕ್ಷದ ಸಮಾವೇಶದಲ್ಲಿ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಂಗರಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ, ಪುತ್ರಿಯರಾದ ಗೀತಾ ಶಿವರಾಜ್ ಕುಮಾರ್, ಸುಜಾತ ತಿಲಕ್ ಕುಮಾರ್ ಹಾಗೂ ಹಾಲಿ ಸೊರಬ ಶಾಸಕ ಮಧು ಬಂಗಾರಪ್ಪ ಅವರ ಹೆಸರೂ ಚರ್ಚೆಗೆ ಬಂದಿದೆ.
ಆದರೆ, ಮಧು ಅವರನ್ನು ರಾಜ್ಯ ರಾಜಕಾರಣದಲ್ಲಿಯೇ ಉಳಿಸಿಕೊಳ್ಳುವ ಆಸೆ ಇದೆ. ಉಳಿದ ಮೂವರಲ್ಲಿ ಯಾರಾದರೂ ಅಭ್ಯರ್ಥಿ ಆಗಬಹುದು ಎಂದಿದ್ದಾರೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ರಾಜ್ಯದಲ್ಲಿ 10ರಿಂದ 12 ಸ್ಥಾನದಲ್ಲಿ ಜೆಡಿಎಸ್ ಗೆಲವು ಸಾಧಿಸುವುದು ನಿಶ್ಚಿತ ಎಂದರು.
ಕಳೆದ ಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಅವರು ಹಣದ ಬಲದಿಂದ ಆಯ್ಕೆಯಾಗಿದ್ದರು. ಪ್ರತಿಬಾರಿಯೂ ಇದು ನಡೆಯುವುದಿಲ್ಲ ಎಂಬುದನ್ನು ಈ ಬಾರಿ ಮತದಾರರು ಸಾಬೀತುಪಡಿಸಲಿದ್ದಾರೆ ಎಂದರು.
ಸ್ಪೀಕರ್ ಕಾಗೋಡು ತಿಮ್ಮಪ್ಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಭವಿಷ್ಯ ನುಡಿದರು.
ನಮ್ಮ ಕುಟುಂಬದ ಯಾರಿಗೇ ಟಿಕೆಟ್ ಸಿಕ್ಕರೂ ಬಂಗಾರಪ್ಪನವರೇ ಅಭ್ಯರ್ಥಿ ಎಂದುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು.ಬಿಜೆಪಿ ಸರ್ಕಾರ ಅಭಿವೃದ್ಧಿಗಿಂತ ಭ್ರಷ್ಟಾಚಾರ ಮಾಡಿದ್ದೇ ಹೆಚ್ಚು.
ಅವರು ಮಾಡಿದ ರಸ್ತೆಗಳಲ್ಲಾ ಗುಂಡಿ ಬಿದ್ದಿವು. ಈ ಗುಂಡಿ ಮುಚ್ಚಲು ಕಾಂಗ್ರೆಸ್ ಸರ್ಕಾರದ ಬಳಿ ಹಣವೇ ಉಳಿದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

