ಶಿವಮೊಗ್ಗ

23ಕ್ಕೆ ಒಂದು ದಿನದ ವೈದ್ಯ ಸಾಹಿತ್ಯ ಸಮ್ಮೇಳನ

Published On :

ಕ.ಪ್ರ. ವಾರ್ತೆ, ಶಿವಮೊಗ್ಗ, ಫೆ.20
ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಒಂದು ದಿನದ ವೈದ್ಯ ಸಾಹಿತ್ಯ ಸಮ್ಮೇಳನವನ್ನು ಫೆ.23ರಂದು ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದೆ.
ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಅಶೋಕ್ ಪೈ ಅವರು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ವೈದ್ಯ ಸಾಹಿತ್ಯ ಸಮ್ಮೇಳನವನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾ. ಡಿಸೋಜ ಅವರು ಉದ್ಘಾಟಿಸಲಿದ್ದು, ಪರಿಷತ್ತಿನ ಅಧ್ಯಕ್ಷ ಡಾ. ಸಿ.ಜಿ. ಕೇಶವಮೂರ್ತಿ ಅಧ್ಯಕ್ಷತೆ ವಹಿಸುವರು. ಐಎಂಎ ಅಧ್ಯಕ್ಷೆ ಡಾ. ವಾಣಿ ಕೋರಿ, ಸುಬ್ಬಯ್ಯ ಮೆಡಿಕಲ್ ಕಾಲೇಜು ನಿರ್ದೇಶಕ ಡಾ. ಎಸ್. ನಾಗೇಂದ್ರ, ಸಿಮ್ಸ್ ನ ಡಾ. ಜವಾಹರ್ ಕದಂ, ಕುವೆಂಪು ವಿವಿ ಕುಲಸಚಿವೆ ಡಾ. ಮಲ್ಲಿಕಾ ಘಂಟಿ ಭಾಗವಹಿಸುವರು ಎಂದರು.
ನಂತರ ನಡೆಯುವ ಗೋಷ್ಠಿಗಳಲ್ಲಿ ಡಾ. ಕೆ.ಆರ್. ಶ್ರೀಧರ್, ಸಾಗರದ ಡಾ. ಎಚ್.ಎಸ್. ಮೋಹನ್, ಡಾ. ಕೆ.ಆರ್. ರವೀಶ್, ಡಾ. ವೀಣಾ ಭಟ್, ಡಾ. ಪದ್ಮಿನಿ ಪ್ರಸಾದ್, ಡಾ. ಕೆ.ಆರ್. ರತ್ನಾಕರ್, ಡಾ. ರಾಜೇಂದ್ರ ಚೆನ್ನಿ, ವಿಜಯಾ ಶ್ರೀಧರ್, ಡಾ. ಎಂ.ಕೆ. ಭಟ್ ಪಾಲ್ಗೊಂಡು ವಿಷಯ ಮಂಡಿಸುವರು. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ವಿಚಾರವಾದಿ ಡಾ. ನರೇಂದ್ರ ನಾಯಕ್ ಅವರಿಂದ ಪವಾಡ ರಹಸ್ಯ ಬಯಲು ಕಾರ್ಯಕ್ರಮ ನಡೆಸಿಕೊಡುವರು.
ಸಮ್ಮೇಳನದಲ್ಲಿ ಎರಡು ಪುಸ್ತಕಗಳ ಬಿಡುಗಡೆ ಮಾಡಲಾಗುವುದು. ವೈದ್ಯ ಸಾಹಿತಿಯಗಳ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಇರುತ್ತದೆ. ಆತಿಥ್ಯದ ಖರ್ಚು ಸರಿದೂಗಿಸಲು 150 ಪ್ರತಿನಿಧಿ ಶುಲ್ಕವಿರುತ್ತದೆ. ಸಾರ್ವಜನಿಕರು ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರತಿನಿಧಿ ಶುಲ್ಕ ನೀಡದೇ ಸಕ್ರೀಯವಾಗಿ ಭಾಗವಹಿಸಬಹುದು ಎಂದು ಡಾ. ಅಶೋಕ್ ಪೈ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.