ಕೆಲಸ ವಿಳಂಬ: ಮೆಸ್ಕಾಂ ಎಚ್ಚರಿಕೆ
ಶಿವಮೊಗ್ಗ: ಮೆಸ್ಕಾಂ ಜಾಗೃತದಳ ವ್ಯಾಪ್ತಿಗೆ ಬರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗ್ರಾಹಕರಿಗೆ ಮೆಸ್ಕಾಂ ಕಂಪನಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಕಾಲದಲ್ಲಿ ಕಂಪನಿಯ ಕೆಲಸ- ಕಾರ್ಯ ನಿರ್ವಹಿಸುವಲ್ಲಿ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯ ಜಾಗೃತದಳದ ಪೊಲೀಸ್ ಅಧೀಕ್ಷಕರು ಎಚ್ಚರಿಸಿದ್ದಾರೆ.
ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ ನೀಡಿದಲ್ಲಿ ಮತ್ತು ಮೆಸ್ಕಾಂಗೆ ಸಂಬಂಧಪಟ್ಟ ವಿದ್ಯುತ್ ಸಾಮಗ್ರಿಗಳನ್ನು ದುರ್ಬಳಕೆ ಮಾಡಿದ ಬಗ್ಗೆ ಗ್ರಾಹಕರು ಮಾಹಿತಿ ನೀಡಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ್ದಾರೆ.
ಮೆಸ್ಕಾಂನ ಅಧಿಕಾರಿ ಮತ್ತು ಸಿಬ್ಬಂದಿ ಲಂಚಕ್ಕಾಗಿ ಆಮಿಷ ಒಡ್ಡಿದ ಬಗ್ಗೆ ಮಾಹಿತಿ ನೀಡಿದಲ್ಲಿ, ಅವರ ಮೇಲೆ ಲಂಚ ನಿರ್ಮೂಲನಾ ಕಾಯ್ದೆಯ ಪ್ರಕಾರ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಅಲ್ಲದೆ, ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ದುರುಪಯೋಗ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಇದ್ದಲ್ಲಿ ಸಂಪರ್ಕಿಸಬಹುದೆಂದು ಹೇಳಿದ್ದಾರೆ. ಹೆಚ್ಚಿನ ವಿವರಗಳಿಗೆ ಪೊಲೀಸ್ ಅಧೀಕ್ಷಕ ಹರಿಶ್ಚಂದ್ರ ಅವರನ್ನು ಸಂಪರ್ಕಿಸಬಹುದು. ಮೊ. 9480833069, ಪೊಲೀಸ್ ಉಪಾಧೀಕ್ಷಕ ವಿನಯ್ ಎ.ಗಾಂವಕರ್ ಅವರ ಮೊ. 9448998729 ಗೆ ಮಾಹಿತಿ ನೀಡುವಂತೆ ತಿಳಿಸಿದ್ದು, ನಾಲ್ಕು ಜಿಲ್ಲೆಗಳ ಜಾಗೃತದಳ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಮತ್ತು ಪೊಲೀಸ್ ಠಾಣೆ ಸಂಪರ್ಕಿಸಲೂ ಅವಕಾಶವಿದೆ.
ಮೆಸ್ಕಾಂ ಜಾಗೃತದಳ ಪೊಲೀಸ್ ಠಾಣೆ, ಶಿವಮೊಗ್ಗ- 08182-295710, ಮೊ. 9448289447 ಇಲ್ಲಿಗೆ ಮಾಹಿತಿ ನೀಡುವಂತೆ ಹಾಗೂ ಮಾಹಿತಿ ನೀಡಿದವರ ಹೆಸರು ಹಾಗೂ ಇತರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಮ.ವಿ.ಸ.ಕಂ. ಜಾಗೃತ ದಳ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

