ಶಿವಮೊಗ್ಗ

ಯೋಜನೆ ಅನುಷ್ಠಾನಕ್ಕೆ ಎಸ್‌ಡಿಎಂಸಿ ಪ್ರಯತ್ನ

Published On :

ಸೊರಬ: ಶಾಲೆಗೆ ಒದಗಿ ಬರುವ ಅನುದಾನಗಳು ಮಕ್ಕಳ ಪ್ರಗತಿ ಶೈಕ್ಷಣಿಕ ಮಟ್ಟ ಹಾಗೂ ಶಿಕ್ಷಕರ ಕಾರ್ಯನಿರ್ವಹಣೆ ಸ್ಥಳೀಯ ಸಂಸ್ಥೆಗಳಿಂದ ಅನುದಾನಗಳನ್ನು ಹಾಗೂ ಸರ್ಕಾರದ ಯೋಜನೆಯಾದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅನುಷ್ಟಾನಕ್ಕೆ ತರಲು ಎಸ್‌ಡಿಎಮ್‌ಸಿ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಿಆರ್‌ಪಿ ಸಮನ್ವಯ ಅಧಿಕಾರಿ ಪಂಚಾಕ್ಷರಿ ತಿಳಿಸಿದರು. ಗುರುವಾರ ಪಟ್ಟಣದ ಕಾನಕೇರಿ ಬಡಾವಣೆಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಡಬ್ಲೂಡಿ ಕ್ಲಸ್ಟರ್ ವ್ಯಾಪ್ತಿಯ ಎಸ್‌ಡಿಎಮ್‌ಸಿ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದಿಂದ ಶಾಲೆಗೆ ಬಂದ ಸೌಲತ್ತುಗಳನ್ನು ಸಮರ್ಪಕ ಬಳಕೆ ಹಾಗೂ ನಿರ್ವಹಣೆಗಾಗಿ ಸದಸ್ಯರುಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.  ಎಸ್‌ಡಿಎಮ್‌ಸಿ ಅಧ್ಯಕ್ಷ ಇಸ್ಮಾಯಿಲ್ ಸಾಬ್ ಅಧ್ಯಕ್ಷತೆ ವಹಿಸಿದ್ದರು. ರುದ್ರಸ್ವಾಮಿ ಹಾಗೂ ದಿವಾಕರ ನಾಯ್ಕ್ ತರಬೇತಿ ನೀಡಿದರು.
ಕೆಂಡಪ್ಪಗೌಡ, ಷಣ್ಮುಖಾಚಾರ್, ಅನಿತಾ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.