ಇಂದಿನಿಂದ ತಾಲೂಕು ಮಟ್ಟದ ಕೃಷಿ ಉತ್ಸವ
ತೀರ್ಥಹಳ್ಳಿ: ಫೆ.24 ಸೋಮವಾರದಿಂದ ಬಸವಾನಿಯಲ್ಲಿ ತಾಲೂಕು ಮಟ್ಟದ ಕೃಷಿ ಉತ್ಸವವನ್ನು 2 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಈ ಮೇಳ ಹಮ್ಮಿಕೊಳ್ಳಲಾಗಿದೆ.
ಕೃಷಿಯೇ ಜೀವಾಳ ಎನ್ನುವ ಗ್ರಾಮೀಣರಿಗೆ ಪೂರಕವಾದ ಯೋಜನೆ ನಿಗದಿತ ಸಮಯದಲ್ಲಿ ಕೃಷಿಕರಿಗೆ ತಲುಪುವಂತೆ ಮಾಡುವ ಪ್ರಯತ್ನ ಇದಾಗಿದ್ದು, ಈ ನಿಟ್ಟಿನಲ್ಲಿ ಸಂಸ್ಥೆ ಪ್ರತಿವರ್ಷ ಕೃಷಿ ಮೇಳ ನಡೆಸಿಕೊಂಡು ಬರುತ್ತಿದೆ ಎಂದರು.
ಇಲ್ಲಿಯವರೆಗೆ ಹಲವಾರು ಕೃಷಿಮೇಳಗಳನ್ನು ರಾಜ್ಯಮಟ್ಟದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಇಂತಹ ಉತ್ಸವಗಳಲ್ಲಿ ತಾಲೂಕು ಮಟ್ಟದ ಕೃಷಿಮೇಳವೂ ಒಂದಾಗಿದ್ದು, ತೀರ್ಥಹಳ್ಳಿ ತಾಲೂಕಿನಲ್ಲಿ ಇದು ಎರಡನೇ ತಾಲೂಕು ಮಟ್ಟದ ಕೃಷಿ ಮೇಳವಾಗಿದೆ.
ಸಂಸದ ಬಿ.ವೈ. ರಾಘವೇಂದ್ರ ಕೃಷಿಮೇಳವನ್ನು ಉದ್ಘಾಟಿಸುವರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ಕಾರ್ಯವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ಆಶಯ ಭಾಷಣ ಮಾಡುವರು. ಕೂಳೂರು ಸತ್ಯನಾರಾಯಣ ರಾವ್ ಅಧ್ಯಕ್ಷತೆ ವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

