ಮಂಗನಕಾಯಿಲೆ ಚಿಕಿತ್ಸಾ ವಾರ್ಡಿಗೆ ಸಚಿವ ಭೇಟಿ
ತೀರ್ಥಹಳ್ಳಿ: ತಾಲೂಕಿನ ಕೆಲವು ಭಾಗಗಳಲ್ಲಿ ಕಂಡುಬರುತ್ತಿರುವ ಕೆಎಫ್ಡಿ ರೋಗದ ಚಿಕಿತ್ಸೆಗಾಗಿ ಇಲ್ಲಿನ ಜೆಸಿ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ವಿಶೇಷ ವಾರ್ಡಿಗೆ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಕೆಎಫ್ಡಿ ಪೀಡಿತ ಗ್ರಾಮಗಳಲ್ಲಿ ರೋಗ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಎಸ್. ಪ್ರಕಾಶ್ ಅವರಿಂದ ವಿವರ ಪಡೆದ ಅವರು ಆ ಗ್ರಾಮದ ಜನ ಆತಂಕಕ್ಕೊಳಗಾಗದಂತೆ ಭರವಸೆ ತುಂಬುವಂತಹ ಕಾರ್ಯವಾಗಬೇಕೆಂದು ತಿಳಿಸಿದರು.
ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಜೊತೆಗೆ ರೋಗ ಪೀಡಿತರ ಚಿಕಿತ್ಸೆಗಾಗಿ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲೂ ಔಷಧಿಗಳು ದಾಸ್ತಾನಿಟ್ಟುಕೊಳ್ಳುವಂತೆ ಸೂಚಿಸಿದ ಅವರು, ಹೆಚ್ಚುವರಿಯಾಗಿ ಬೇಕಾಗುವ ಔಷಧಿಗಳ ಪಟ್ಟಿ ನೀಡುವಂತೆ ಸೂಚಿಸಿ ಅಗತ್ಯ ಔಷಧಿಗಳನ್ನು ಕೂಡಲೇ ಸರಬರಾಜು ಮಾಡಲು ಹಾಗೂ ಲಸಿಕೆ ಸರಬರಾಜಿನ ವ್ಯತ್ಯಯದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ವಿವರ ಪಡೆದು ಆರೋಗ್ಯ ಸಚಿವರೊಂದಿಗೆ ಮಾತನಾಡಿ ಆ ಬಗ್ಗೆ ಸೂಕ್ತ ಕ್ರಮವಹಿಸುವುದಾಗಿ ತಿಳಿಸಿದರು.
ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಯಾವುದೇ ಔಷಧಿಗಳ ಕೊರತೆಯಾಗಬಾರದೆಂದು ಸೂಚಿಸಿದ ಅವರು, ತಾಲೂಕು ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ಔಷಧಿಗಳ ಪಟ್ಟಿಯನ್ನು ಕೂಡಲೇ ನೀಡುವಂತೆ ಸೂಚಿಸಿ, ಅದನ್ನು ಸರಬರಾಜು ಮಾಡಲು ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ದಾಖಲಾಗಿದ್ದ ರೋಗಿಗಳನ್ನು ಭೇಟಿ ಮಾಡಿ ರೋಗ ಚಿಕಿತ್ಸೆಗೆ ಅಗತ್ಯ ಕ್ರಮ ವಹಿಸಲಾಗಿದ್ದು, ಯಾವುದೇ ಆತಂಕಕ್ಕೊಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ಟಿ.ಎಲ್. ಸುಂದರೇಶ್ ಉಪಸ್ಥಿತರಿದ್ದು ರೋಗಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಜೆ.ಸಿ. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಮಂಜುನಾಥ್ ಮತ್ತು ತಜ್ಞ ವೈದ್ಯಾಧಿಕಾರಿ ಡಾ. ಪ್ರಭಾಕರ್, ಆಸ್ಪತ್ರೆಯಲ್ಲಿ ಈ ಬಗ್ಗೆ ಒಟ್ಟು 80 ಸಂಶಯಾಸ್ಪದ ಜ್ವರ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 74 ರಕ್ತದ ಮಾದರಿಗಳನ್ನು ಕೆಎಫ್ಡಿ ಪರೀಕ್ಷೆಗಾಗಿ ಶಿವಮೊಗ್ಗದ ವಿಡಿಎಲ್ ಸಂಸ್ಥೆಗೆ ಕಳುಹಿಸಲಾಗಿದ್ದು, ಅವುಗಳಲ್ಲಿ 21 ಪ್ರಕರಣಗಳು ಪಾಸಿಟೀವ್ ಎಂದು ವರದಿಯಾಗಿವೆ. ಈ ವರೆಗೂ ಕೆಎಫ್ಡಿ ಯಾವುದೇ ಸಾವು ಸಂಬವಿಸಿರುವುದಿಲ್ಲವೆಂಬ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

