ಶಿವಮೊಗ್ಗ

'ಕಾಂಗ್ರೆಸ್, ಬಿಜೆಪಿಯಿಂದ ದೇಶದಲ್ಲಿ ಅರಾಜಕತೆ'

Published On :

ಕ.ಪ್ರ.ವಾರ್ತೆ, ಸೊರಬ, ಫೆ.24 ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ದೋಷಿಸಿಕೊಂಡು ಜನರ ಭಾವನೆಗಳನ್ನು ಕೆರಳಿಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಶಾಸಕ ಮಧು ಬಂಗಾರಪ್ಪ ಎಚ್ಚರಿಸಿದ್ದಾರೆ.
ಪಟ್ಟಣದ ಶಾಸಕರ ಕಚೇರಿಯಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಎರಡೂ ಪಕ್ಷಗಳಿಂದ ದೇಶದ ಸಮಗ್ರ ಅಭಿವೃದ್ಧಿ ಅಸಾಧ್ಯವಾಗಿದ್ದು, ದೇಶದ ಮತದಾರರು ತೃತೀಯ ರಂಗದ ಕಡೆಗೆ ಮುಖ ಮಾಡಿದ್ದಾರೆ. ಈಗಾಗಲೇ ಭಾರೀ ಪ್ರಚಾರದಲ್ಲಿರುವ ರಾಗಾ ಹಾಗೂ ನಮೋಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌ಗೆ ಎಷ್ಟೇ ಸ್ಥಾನ ಬಂದರೂ ಅದರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೆಲ್ಲುವ ಜೆಡಿಎಸ್ ಅಭ್ಯರ್ಥಿಯೂ ಕೂಡಾ ಒಬ್ಬರಾಗಿರುತ್ತಾರೆ ಎಂದರು.  
ಆಟ ನಡೆಯದು: ಕೆಜೆಪಿ ಕಟ್ಟಿ ತಮ್ಮ ವರ್ಚಸ್ಸು ಕಳೆದುಕೊಂಡು ಪುನಃ ಬಿಜೆಪಿಗೆ ಹಿಂದಿರುಗಿರುವ ಬಿ.ಎಸ್.ವೈ. ಮತ್ತು ಬಿ.ವೈ. ರಾಘವೇಂದ್ರ ಅವರ ಆಟ ಈ ಚುನಾವಣೆಯಲ್ಲಿ ನಡೆಯುವುದಿಲ್ಲ. ಶಿವಮೊಗ್ಗ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡದ ಕಾರಣ ಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಿಂದ ಸಂಸದ ಬಿ.ವೈ ರಾಘವೇಂದ್ರ ತಮ್ಮ ಸ್ಥಾನವನ್ನು ತಮ್ಮ ತಂದೆ ಬಿ.ಎಸ್. ಯಡಿಯೂರಪ್ಪನವರಿಗೆ ಬಿಟ್ಟುಕೊಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ತಾಲೂಕಿನಲ್ಲಿ ದಿನದಿಂದ ದಿನಕ್ಕೆ ವಿದ್ಯುತ್ ಕ್ಷಾಮ ಹೆಚ್ಚಾಗುತ್ತಿದ್ದು, ವಿದ್ಯುತ್ ಮೋಟರ್ ಅವಲಂಬಿತ ರೈತರಿಗೆ ಬೆಳೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ 7 ಗಂಟೆ 3 ಫೇಸ್‌ನಲ್ಲಿ ನಿದ್ಯುತತ್ನೀಡುತ್ತೇವೆ ಎನ್ನುವ ಸರ್ಕಾರ ಕನಿಷ್ಠ 6 ತಾಸು ಕೂಡಾ ವಿದ್ಯುತ್ ಪೂರೈಸುತ್ತಿಲ್ಲ ಎಂದು ಆರೋಪಿಸಿದರು.  
ಮಾರ್ಚ್ 1 ರಂದು ವಿದ್ಯುತ್ ಸಮಸ್ಯೆ ವಿರುದ್ಧ ಜೆಡಿಎಸ್ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ  ಮೂಲಕ ಮೆಸ್ಕಾಂಗೆ ಮುತ್ತಿಗೆ ಹಾಕಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಅಧ್ಯಕ್ಷ ಎಚ್. ಗಣಪತಿ, ಮಹಿಳಾ ಬ್ಲಾಕ್ ಅಧ್ಯಕ್ಷೆ ಶೇಖರಮ್ಮ ರಾಜಪ್ಪ, ವಕ್ತಾರ ಎಂ.ಡಿ. ಶೇಖರ್, ಯುವ ಘಟಕದ ಅಧ್ಯಕ್ಷ ಬಸವೇಶ್ವರ, ಮುಖಂಡ ಶ್ರೀಪಾದರಾವ್ ನಿಸರಾಣಿ, ಶಬ್ಬೀರ್ ಅಹ್ಮದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.