'ಸರ್ಕಾರಿ ಕಟ್ಟಡಗಳಲ್ಲಿ ಬಿಎಸ್ವೈ ಪ್ರಚಾರದ ಫ್ಲೆಕ್ಸ್ ತೆರವುಗೊಳಿಸಿ'
ಶಿವಮೊಗ್ಗ: ಲೋಕಸಭೆ ಚುನಾವಣೆಯ ನಿಯೋಜಿತ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರ ಫ್ಲೆಕ್ಸ್ಗಳಲ್ಲಿ ವಿವಿಧ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಕಟ್ಟಡಗಳ ಫೋಟೋ ಬಳಸುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತೆರವುಗೊಳಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ದಕ್ಷಿಣ ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ವಿ.ವಿಶ್ವನಾಥ್ (ಕಾಶಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಾರ್ವಜನಿಕರ ಹಣದಿಂದ ನಿರ್ಮಿಸಿದ ಈ ಕಟ್ಟಡಗಳು, ಕಾಮಗಾರಿಗಳನ್ನು ತಮ್ಮ ಪ್ರಚಾರಕ್ಕೆ ಬಳಸುತ್ತಿರುವುದು ಸರಿ ಅಲ್ಲ. ಸರ್ಕಾರಿ ಕಟ್ಟಡಗಳಾದ ಬಸ್ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ, ಕ್ರೀಡಾಂಗಣ, ಬಿ.ಎಚ್. ರಸ್ತೆ, ಆಯುರ್ವೇದ ಕಾಲೇಜು ಇತ್ಯಾದಿ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಇವುಗಳನ್ನು ಕೂಡಲೇ ತೆರವುಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮನವಿ: ಬಿಜೆಪಿ ಮುಖಂಡರು ತಮ್ಮ ಸ್ವಂತ ಆಸ್ತಿಯಾದ ರಾಯನ್ ಆರ್ಕೆಡ್, ಪೆಸಿಟ್ ಕಾಲೇಜು, ನಾರಾಯಣ ಹೃದಯಾಲಯ ಕಟ್ಟಡ, ಶಿಕಾರಿಪುರದ ಕುಮದ್ವತಿ ಶಿಕ್ಷಣ ಸಂಸ್ಥೆಗಳ ಫೋಟೋಗಳನ್ನು ಫ್ಲೆಕ್ಸ್ಗಳಲ್ಲಿ ಬಳಸಿಕೊಂಡು ತಾವು ಹೇಗೆ ಅಭಿವೃದ್ಧಿಗೊಂಡೆವು ಎಂಬುದನ್ನು ಜನರಿಗೆ ತಿಳಿಸುವ ಕೆಲಸ ಮಾಡಿದರೆ ನಮ್ಮ ಅಭ್ಯಂತರವಿರುವುದಿಲ್ಲ. ಜನರ ತೆರಿಗೆ ಹಣದಲ್ಲಿ ನಿರ್ಮಾಣವಾದ ಸರ್ಕಾರಿ ಕಟ್ಟಡಗಳ ಫೋಟೋಗಳನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವುದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.
ಪ್ರತಿಭಟನೆಯಲ್ಲಿ ದೇವೇಂದ್ರಪ್ಪ, ವಿನ್ಸಂಟ್ ರೋಡ್ರಿಗಸ್ ಸೇರಿದಂತೆ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

