ನಾಳೆ ಭದ್ರಾವತಿ ತಾ. ಸಾಹಿತ್ಯ ಸಮ್ಮೇಳನ
ಭದ್ರಾವತಿ: 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.1ರ ಶನಿವಾರ ಎಂಪಿಎಂ ಕಲ್ಯಾಣ ಮಂದಿರದಲ್ಲಿ ನಿರ್ಮಿಸಲಾಗುವ ಡಾ. ಜಿ.ಎಸ್. ಶಿವರುದ್ರಪ್ಪ ವೇದಿಕೆಯಲ್ಲಿ ನಡೆಯಲಿದೆ ಎಂದು ಕಸಾಪ ತಾ. ಘಟಕದ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ತಿಳಿಸಿದರು.
ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದಕ್ಕಾಗಿ ಕಾಗದನಗರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ.ವಿ. ಮಹಾದ್ವಾರಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಮಾ.1ರಂದು ಬೆಳಗ್ಗೆ 10 ಗಂಟೆಗೆ ಡಾ. ಅನುಪಮಾ ನಿರಂಜನ ವೇದಿಕೆಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಡಾ. ಟೀಕಪ್ಪಗೌಡ ಶಿಬಿರವನ್ನು ಉದ್ಘಾಟಿಸುವರು. ಡಾ. ಆರ್.ಸಿ. ಬೆಂಗಳೂರಿ ಮತ್ತು ಡಾ. ನರೇಂದ್ರಬಾಬು ಉಪಸ್ಥಿತರಿರುವರು.
ತಹಸೀಲ್ದಾರ್ ಸಿದ್ಧಮಲ್ಲಪ್ಪ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ನಾಡಧ್ವಜವನ್ನು ಡಿವೈಎಸ್ಪಿ ಸದಾನಂದ ಬಿ. ನಾಯಕ್ ಹಾಗೂ ಕ.ಸಾ.ಪ ಧ್ವಜವನ್ನು ತಾಲೂಕು ಕ.ಸಾ.ಪ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಧ್ವಜಾರೋಹಣ ನಡೆಸಿಕೊಡುವರು.
ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಕಾಗದನಗರದ ಸ್ಟೆಟ್ ಬ್ಯಾಂಕ್ ವೃತ್ತದಿಂದ ಹೊರಟು ಎಂಪಿಎಂ ಕಲ್ಯಾಣ ಮಂದಿರವನ್ನು ತಲುಪುವುದು. 10 ಗಂಟೆಗೆ ಪ್ರಾರಂಭವಾಗುವ ಸಮ್ಮೇಳನವನ್ನು ಮೈಸೂರಿನ ಹಿರಿಯ ಸಾಹಿತಿ ಕಾಳೇಗೌಡ ನಾಗವಾರ ಉದ್ಘಾಟಿಸುವರು. ಶಾಸಕ ಎಂ.ಜೆ. ಅಪ್ಪಾಜಿ ಆಶಯ ನುಡಿಗಳನ್ನಾಡುವರು. ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದೂ ಪೂರ್ಯಾನಾಯ್ಕ ಸಾಹಿತಿ ಜಿ.ಎಸ್. ಶಿವರುದ್ರಪ್ಪ ಅವರ ಭಾವಚಿತ್ರವನ್ನು ಅನಾವರಣ ಮಾಡುವರು ಎಂದರು.
ಭಗವತಿಕೆರೆಯ ಪ್ರಗತಿಪರ ಚಿಂತಕ ಕಡಿದಾಳ್ ಶಾಮಣ್ಣ ಸರ್ ಎಂ. ವಿಶ್ವೇಶ್ವರಾಯನವರ ಭಾವಚಿತ್ರವನ್ನು ಅನಾವರಣ ಮಾಡುವರು. ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಎಂ. ಚಂದ್ರಶೇಖರಯ್ಯ, ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಿ. ಮಂಜುನಾಥ್, ಎನ್.ಕೆ. ಶಂಕರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಸಾಪ ತಾ. ಕಾರ್ಯದರ್ಶಿಗಳಾದ ಎಚ್. ತಿಮ್ಮಪ್ಪ ಮತ್ತು ಪಿ.ಕೆ. ಸತೀಶ್ ಹಾಗೂ ಕೋಶಾಧ್ಯಕ್ಷ ಕೋಡ್ಲು ಯಜ್ಞಯ್ಯ ಮತ್ತಿತರ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

