ನಿವೃತ್ತಿ ನಂತರ ನೆಮ್ಮದಿ ಮುಖ್ಯ
ಕ.ಪ್ರ.ವಾರ್ತೆ, ಭದ್ರಾವತಿ, ಜ.1
ವೃತ್ತಿ ಜೀವನದಲ್ಲಿ ನಿವೃತ್ತಿ ಅನಿವಾರ್ಯ, ಆದರೆ ನಿವೃತ್ತಿಯ ನಂತರ ನೆಮ್ಮದಿ ಜೀವನ ಅಗತ್ಯವಾಗಿದ್ದು, ಹೀಗೆ ಜೀವನ ನಡೆಸುವ ಭಾಗ್ಯ ಕೆಲವೇ ಮಂದಿಗೆ ಲಭ್ಯವಾಗುತ್ತದೆ ಎಂದು ಶಾಸಕ ಎಂ.ಜೆ.ಅಪ್ಪಾಜಿ ಹೇಳಿದರು.
ಅವರು ಸೋಮವಾರ ನಗರ ಪಡಿತರ ವಿತರಕರ ಸಂಘ ಪಟ್ಟಣದ ವೀರಶೈವ ಸಭಾಭವನದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಹಾಯಕ ನಿರ್ದೇಶಕರಾಗಿ ನಿವೃತ್ತಿ ಹೊಂದಿದ ಸಿ. ಜಯಪ್ಪ ಅವರಿಗೆ ಬೀಳ್ಕೊಡುಗೆ ಮತ್ತು ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಮೀಶನ್ ಹೆಚ್ಚಳ: ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಅವರ ಶ್ರಮದಿಂದ ಪಡಿತರ ವಿತರಕರ ಸಮಸ್ಯೆ ಪರಿಹಾರವಾಗಿ ಅವರಿಗೆ ದೊರಕುತ್ತಿದ್ದ ಕಮೀಶನ್ ಹೆಚ್ಚಾಗಿದೆ. ಅವರನ್ನು ನಗರ ಪಡಿತರ ವಿತರಕರ ಸಂಘ ಅಭಿನಂದಿಸುತ್ತಿರುವುದು ಹೆಚ್ಚು ಪ್ರಸ್ತುತವಾಗಿದೆ ಎಂದು ಅಪ್ಪಾಜಿ ಹೇಳಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ, ರಾಜ್ಯದಲ್ಲಿ ಪಡಿತರ ವಿತರಕರ ಬೇಡಿಕೆಗಳು ಇನ್ನೂ ಸಾಕಷ್ಟಿವೆ. ಹಂತಹಂತವಾಗಿ ಅವನ್ನು ಸರ್ಕಾರದೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಶಾಸಕ ಎಂ.ಜೆ. ಅಪ್ಪಾಜಿಯವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಡಿತರ ವಿತರಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಈಶ್ವರಾಚಾರ್ ಮಾತನಾಡಿ, ಸಿ. ಜಯಪ್ಪ ಮತ್ತು ಟಿ. ಕೃಷ್ಣಪ್ಪ ಅವರ ವ್ಯಕ್ತಿತ್ವವನ್ನು ಕೊಂಡಾಡಿದರು. ನಗರ ಪಡಿತರ ವಿತರಕರ ಸಂಘದ ಉಪಾಧ್ಯಕ್ಷ ಜಿ.ಡಿ. ನಟರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ಪಡಿತರ ವಿತರಕರ ಸಂಘದ ನಿರ್ದೇಶಕ ಸಿದ್ದಲಿಂಗಯ್ಯ, ಶಿವಮೊಗ್ಗ ಜಿಲ್ಲಾ ಪಡಿತರ ವಿತರಕರ ಸಂಘದ ಅಧ್ಯಕ್ಷ ವಿ.ಷಣ್ಮುಖಪ್ಪ ಗೌಡ, ತುಮಕೂರು ಜಿಲ್ಲಾ ಪಡಿತರ ವಿತರಕರ ಸಂಘದ ನಟರಾಜ್, ರಾಜ್ಯ ಪಡಿತರ ವಿತರಕರ ಸಂಘದ ಉಪಾಧ್ಯಕ್ಷ ರಾಮಚಂದ್ರ, ಮಂಡ್ಯ ಜಿಲ್ಲಾ ಪಡಿತರ ವಿತರಕರ ಸಂಘದ ದೇವರಾಜ್, ನಗರಸಭಾ ಸದಸ್ಯ ಬದರಿ ನಾರಾಯಣ, ವಿಶಾಲಾಕ್ಷಿ, ಹಿರಿಯ ಪಡಿತರ ವಿತರಕ ರಾಜಗೋಪಾಲ ನಾಯ್ಡು ಮೊದಲಾದವರು ಇದ್ದರು.
ನಗರ ಪಡಿತರ ವಿತರಕರ ಸಂಘದ ಅಧ್ಯಕ್ಷ ಸಿ.ಆರ್. ಶಿವರಾಂ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆ.ಎನ್. ರವೀಂದ್ರನಾಥ್ ಪ್ರಾರ್ಥಿಸಿದರು. ಜಿ. ಕುಮಾರ್ ಸ್ವಾಗತಿಸಿದಗರು. ವಾಗೀಶ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

