ಶಿವಮೊಗ್ಗ

'ಗ್ರಾಮ ಸಹಾಯಕರ ನೇಮಕದಲ್ಲಿ ಅಕ್ರಮ'

Published On :

ಕ.ಪ್ರ.ವಾರ್ತೆ, ಸಾಗರ, ಜ.1
ತಾಲೂಕಿನಲ್ಲಿ ಗ್ರಾಮ ಸಹಾಯಕರ ಹುದ್ದೆ ನೇಮಕಾತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ಸಿನ ಕೆಲವು ಮುಖಂಡರು ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಚೇತನರಾಜ್ ಕಣ್ಣೂರು ಆರೋಪಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ, ತಾಲೂಕಿನ 35 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 37 ಗ್ರಾಮ ಸಹಾಯಕರ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿದೆ. ಈಗಾಗಲೆ 34 ಹುದ್ದೆ ಭರ್ತಿ ಮಾಡಲಾಗಿದ್ದು, ಇದರಲ್ಲಿ 22 ಹುದ್ದೆಗಳು ಅಕ್ರಮವಾಗಿದೆ. ಅಭ್ಯರ್ಥಿಗಳಿಂದ ಹಣ ಪಡೆದು ಅರ್ಹರನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
ಗ್ರಾಮ ಸಹಾಯಕರ ಹುದ್ದೆ ನೇಮಕಾತಿ ಸಂದರ್ಭದಲ್ಲಿ ಸರ್ಕಾರ ನೀಡಿದ ನಿಯಮಾವಳಿ ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದ ಅವರು, ನಿಯಮಗಳ ಪ್ರಕಾರ ಆಯಾ ವೃತ್ತದಲ್ಲಿ ವಾಸಿಸುವವರನ್ನು ನೇಮಕ ಮಾಡಿಕೊಳ್ಳಬೇಕು.
ಹಿಂದೆ ತೋಟಿ, ತಳವಾರ, ನೀರಗಂಟಿ ಆಗಿ ಕೆಲಸ ಮಾಡಿರುವ ಕುಟುಂಬದ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಆದರೆ, ಇಲ್ಲಿ ಎಲ್ಲ ನಿಯಮ ಉಲ್ಲಂಘಿಸಿ ನೇಮಕಾತಿ ನಡೆದಿದೆ.
ಈ ಕುರಿತು ತನಿಖೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ, ಉಪ ವಿಭಾಗಾಧಿಕಾರಿಗಳಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದರು.
ನಿಯಮ ಉಲ್ಲಂಘನೆ: ಬರೂರು ವೃತ್ತದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾಮನ್ ರಾಜಪ್ಪ ಅವರನ್ನು ನೇಮಕಾತಿ ಮಾಡುವ ಬದಲು ಅರ್ಹತೆ ಇಲ್ಲದ ಕುಮಾರ ಎಂಬವರನ್ನು ನೇಮಕ ಮಾಡಿದ್ದಾರೆ. ಹಸ್ತಕ್ಷೇಪ: ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಭ್ರಷ್ಟಾಚಾರಮುಕ್ತ ಆಡಳಿತ ನೀಡುವುದಾಗಿ ಹೇಳಿದ್ದ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭಾಧ್ಯಕ್ಷರು ಆಗಿರುವ ಕಾಗೋಡು ತಿಮ್ಮಪ್ಪ ಅವರ ಹಿಂಬಾಲಕರೆ ಅಕ್ರಮ ನೇಮಕಾತಿಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ.
ಕಾಗೋಡು ತಿಮ್ಮಪ್ಪ ಅವರು ಇದನ್ನು ನೋಡಿಯೂ ಕಣ್ಮುಚ್ಚಿಕೊಂಡು ಕುಳಿತಿರುವುದು ಅವರ ವ್ಯಕ್ತಿತ್ವಕ್ಕೆ ಕಳಂಕ ತರುವಂತಿದೆ. ಅಕ್ರಮ ನೇಮಕಾತಿ ಕುರಿತು ತಕ್ಷಣ ತನಿಖೆ ನಡೆಸಬೇಕು. ಇಲ್ಲವಾದರೆ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯು.ಎಚ್. ರಾಮಪ್ಪ, ಪ್ರಮುಖರಾದ ಸತೀಶಬಾಬು, ರವೀಶಕುಮಾರ್, ವ.ಶಂ. ರಾಮಚಂದ್ರ ಭಟ್, ಶ್ರೀನಿವಾಸ್, ಕಲಸೆ ಚಂದ್ರಪ್ಪ, ರಾಜಪ್ಪ ಬರೂರು, ಜೇನುಕಲ್ಲಪ್ಪ ಕಲಸೆ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.