ಫ್ಲೆಕ್ಸ್ ತೆರವಿಗೆ ವರ್ತಕರ ಮನವಿ
ಶಿವಮೊಗ್ಗ: ನಗರದ ಎ.ಎ. ವೃತ್ತದಲ್ಲಿ ಅಳವಡಿಸಿರುವ ಫ್ಲೆಕ್ಸ್ಗಳನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಎ.ಎ. ವೃತ್ತದ ವರ್ತಕರು ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ನಗರದ ಹೃದಯ ಭಾಗದಲ್ಲಿರುವ ಅಮೀರ್ ಅಹ್ಮದ್ ವೃತ್ತದಲ್ಲಿ ಅಳವಡಿಸಿರುವ ಫ್ಲೆಕ್ಸ್ಗಳಿಂದ ಸಾರ್ವಜನಿಕರಿಗೆ ಮತ್ತು ಇಲ್ಲಿನ ಅಂಗಡಿ ಮಾಲೀಕರಿಗೆ ತೊಂದರೆಯಾಗುತ್ತಿದೆ. ಅಂಗಡಿಗಳಿಗೆ ಅಡ್ಡಲಾಗಿ ಹಾಕಿರುವುದರಿಂದ ವ್ಯಾಪಾರ ವಹಿವಾಟಿಗೆ ಬಹಳ ಪೆಟ್ಟು ಬೀಳುತ್ತಿದೆ ಎಂದು ವರ್ತಕರು ಮನವಿಯಲ್ಲಿ ಆರೋಪಿಸಿದ್ದಾರೆ.
ಈಗಾಗಲೇ ಸಬ್- ವೇ ನಿರ್ಮಾಣ ಮಾಡಿರುವುದರಿಂದ ಎಲ್ಲಾ ಅಂಗಡಿ ವ್ಯವಹಾರ ಕುಂಠಿತವಾಗಿದೆ. ಇದೀಗ ಅದರ ಮುಂಭಾಗ ಫ್ಲೆಕ್ಸ್ಗಳನ್ನು ಕಟ್ಟುತ್ತಿರುವುದರಿಂದ ನಮಗೆ ಮತ್ತಷ್ಟು ತೊಂದರೆಯಾಗುತ್ತಿದೆ. ಅಲ್ಲದೇ ಗಾಳಿ ಹೆಚ್ಚಾಗಿ ಪಾದಚಾರಿಗಳ ಮೇಲೆ ಬೀಳುತ್ತಿವೆ. ಸಾರ್ವಜನಿಕರು ಈ ಮಾರ್ಗದಲ್ಲಿ ಓಡಾಡುವುದೇ ಕಷ್ಟಕರವಾಗಿದೆ ಎಂದು ವರ್ತಕರು ಮನವಿಯಲ್ಲಿ ತಿಳಿಸಿದ್ದಾರೆ.
ನಗರದಲ್ಲೇ ಈ ಸ್ಥಳ ಅತೀ ಸೂಕ್ಷ್ಮ ಪ್ರದೇಶವಾಗಿದೆ. ಇಲ್ಲಿ ಎಲ್ಲಾ ರಾಜಕೀಯ, ಧಾರ್ಮಿಕ ಸಭೆ, ಸಮಾರಂಭದ ಫ್ಲೆಕ್ಸ್ಗಳು ಹಾಕಿರುವುದರಿಂದ ಕೆಲ ಕೀಡಿಗೇಡಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಯಾವ ರೀತಿಯ ಗಲಾಟೆ, ಘರ್ಷಣೆ ಸಂಭವಿಸಬಹುದು ಎಂದು ಉಹಿಸಲು ಸಾಧ್ಯವಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳು ನಗರಸಭೆ ಆಯುಕ್ತರು ಹಾಗೂ ಜಿಲ್ಲಾರಕ್ಷಣಾಧಿಕಾರಗಳ ಗಮನಕ್ಕೆ ತರಬೇಕು. ಫ್ಲೆಕ್ಸ್ ಗಳನ್ನು ಶಾಶ್ವತವಾಗಿ ಅಳವಡಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ವರ್ತಕರು ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಆಮೀರ್ ಅಹ್ಮದ್ ವೃತ್ತದಲ್ಲಿ ವರ್ತಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

