ರಾಮೇಗೌಡ, ನಾಗೇಶ್ಗೆ ಚಿನ್ನ
ಭದ್ರಾವತಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಸಂಸ್ಥೆಯವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಡಿ.29ಮತ್ತು 30ರಂದು ನಡೆಸಿದ 33ನೇ ಹಿರಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ ರಾಮೇಗೌಡ 3000 ಮೀ. ನಡಿಗೆ, 1500 ಮೀ. ಹಾಗೂ 800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (ಸ್ವರ್ಣ ಪದಕ) ಗಳಿಸಿ ಪಟ್ಟಣಕ್ಕೆ ಕೀರ್ತಿ ತಂದಿದ್ದಾರೆ. ಅದೇ ರೀತಿ ಭದ್ರಾವತಿ ಅಗ್ನಿಶಾಮಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಬಿ.ಟಿ.ನಾಗೇಶ್ 100 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (ಸ್ವರ್ಣ ಪದಕ), 200 ಮೀ. ಓಟದ ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನ (ರಜತ ಪದಕ), 400 ಮೀ. ಹಡರ್ಲ್ಪ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (ಚಿನ್ನದ ಪದಕ) ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನವನ್ನು (ಕಂಚಿನ ಪದಕ) ಪಡೆದು ಪಟ್ಟಣಕ್ಕೆ ಕೀರ್ತಿ ತಂದಿದ್ದಾರೆ.
ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಸೊರಬ: ಜನವರಿ. 4, 5ರಂದು ರಾತ್ರಿ 8 ಗಂಟೆಗೆ ತಾಲೂಕು ಚಂದ್ರಗುತ್ತಿ ಗ್ರಾಮದಲ್ಲಿ ಮುಕ್ತ ಇಂಡೋರ್ ಡಬಲ್ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ. ಇಲ್ಲಿನ ಪ್ರಿನ್ಸ್ ಕ್ಲಬ್ ನಡೆಸಲಿರುವ ಪಂದ್ಯದಲ್ಲಿ ಪ್ರಥಮ ಬಹುಮಾನವಾಗಿ 5555 ನಗದು ಹಾಗೂ ಪಾರಿತೋಷಕ, ದ್ವಿತೀಯ ಬಹುಮಾನವಾಗಿ 2222 ನಗದು, ಪಾರಿತೋಷಕ ಘೋಷಿಸಲಾಗಿದೆ.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ- 9845783961, 994560809, 9900302170, 988021385, 7353839699, 9741633515 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

