ಶಿವಮೊಗ್ಗ

ತಾಲೂಕು ಮಟ್ಟದ ಯುವಜನ ಮೇಳ

Published On :

ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯಿತಿ ಶಿವಮೊಗ್ಗ, ಗ್ರಾಮ ಪಂಚಾಯಿತಿ ಅಬ್ಬಲಗೆರೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜನವರಿ 5ರಂದು ಬೆಳಗ್ಗೆ 10 ಗಂಟೆಗೆ ಅಬ್ಬಲಗೆರೆಯ ಸರ್ಕಾರಿ ಪ್ರೌಢಶಾಲಾ ಆವರಣದ ರಂಗಮಂದಿರದಲ್ಲಿ ಶಿವಮೊಗ್ಗ ತಾಲೂಕು ಮಟ್ಟದ ಯುವಜನ ಮೇಳ ಏರ್ಪಡಿಸಲಾಗಿದೆ. ಮೇಳವನ್ನು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಉದ್ಘಾಟಿಸುವರು. ಅಬ್ಬಲಗೆರೆ ಗ್ರಾಪಂ ಅಧ್ಯಕ್ಷೆ ಮಂಜಮ್ಮ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಪಂಚಾಯಿತಿಯ ಸದಸ್ಯರು, ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರು ಆಗಮಿಸಲಿರುವರು.

ಇಂದಿನಿಂದ ವನಶ್ರೀ ಸಾಗರೋತ್ಸವ, ಡಾ. ನಾ. ಡಿಸೋಜಗೆ ಸನ್ಮಾನ
ಸಾಗರ: ಇಲ್ಲಿನ ವನಶ್ರೀ ವಿದ್ಯಾಸಂಸ್ಥೆಯ ಮಕ್ಕಳು ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆಯಲ್ಲಿ 15 ಬೆಳ್ಳಿ ಹಾಗೂ 5 ಕಂಚಿನ ಪದಕವನ್ನು ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂದು ವನಶ್ರೀ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಚ್.ಪಿ. ಮಂಜಪ್ಪ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ತನಕ ಯಾವುದೇ ಶಾಲೆ ರಾಷ್ಟ್ರಮಟ್ಟದಲ್ಲಿ ಅತಿಹೆಚ್ಚು ಅಂಕಗಳಿಸಿ, ಇಷ್ಟೊಂದು ದೊಡ್ಡ ಸಾಧನೆ ಮಾಡಿರಲಿಲ್ಲ. ವನಶ್ರೀ ಸಂಸ್ಥೆ ಇಂತಹದ್ದೊಂದು ವಿಶೇಷ ಸಾಧನೆ ಮಾಡಿದೆ ಎಂದು ಹೇಳಿದರು.
ಮಕ್ಕಳ ಸರ್ವತೋಮುಖ ಅಭಿವೃದ್ಧಿಯನ್ನು ಅಭಿವ್ಯಕ್ತಗೊಳಿಸುವ ವನಶ್ರೀ ಸಾಗರೋತ್ಸವ ಕಾರ್ಯಕ್ರಮವು ಜ.3ರಿಂದ 5ರ ವರೆಗೆ ವರದಹಳ್ಳಿ ರಸ್ತೆಯಲ್ಲಿರುವ ಶಾಲೆಯ ಆವರಣದಲ್ಲಿ ನಡೆಯಲಿದೆ. ಜ.3ರಂದು ಯಡತೊರೆ ಸರಸ್ವತಿಮಠದ ಶ್ರೀ ಶಂಕರ ಭಾರತೀ ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಂಗಾರಮಕ್ಕಿ ಕ್ಷೇತ್ರದ ಮಾರುತಿ ಗುರೂಜಿ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜ.4ರ ಸಭಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್, ಸಿಗಂದೂರು ಕ್ಷೇತ್ರದ ಧರ್ಮದರ್ಶಿಗಳಾದ ರಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ  ಪಾಣಿ ನಿಂಗಪ್ಪ ಹಾಗೂ ಉದ್ಯಮಿ ಪ್ರಭಾಕರ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಜ.5ರಂದು ಸಮಾರಂಭದಲ್ಲಿ ಡಾ. ನಾ. ಡಿಸೋಜ ಅವರನ್ನು ಸನ್ಮಾನಿಸಲಾಗುವುದು. ಸಿಗಂದೂರು ಕ್ಷೇತ್ರದ ಪ್ರಧಾನ ಅರ್ಚಕ ಎಸ್.ಪಿ. ಶೇಷಗಿರಿ ಭಟ್ಟರಿಗೆ ಅರ್ಚಕಶ್ರೀ  ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.