ಶಿವಮೊಗ್ಗ

ಬಸವಜ್ಯೋತಿ ಯಾತ್ರೆಗೆ ಭವ್ಯ ಸ್ವಾಗತ

Published On :

ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಬಸವಾಶ್ರಮ, ಬಸವಕೇಂದ್ರ ವೀರಶೈವ ಮಹಾಸಭಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 46 ದಿನಗಳ ಬಸವಜ್ಯೋತಿ ಯಾತ್ರೆಗೆ ಪಟ್ಟಣದ ಅಕ್ಕನ ಬಳಗದ ಆಶ್ರಯದಲ್ಲಿ ಸ್ವಾಗತ ಕೋರಿ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮುಖಾಂತರ ಬಸವೇಶ್ವರ ದೇವಸ್ಥಾನಕ್ಕೆ ಕರೆತರಲಾಯಿತು. ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಮಾತೆ ಶರಣಾಂಬಿಕಾತಾಯಿ ಮಾತನಾಡಿ, ಜಗಜ್ಯೋತಿ ಬಸವೇಶ್ವರರ ಶತಮಾನೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಒಟ್ಟು 111ಗ್ರಾಮ ಗಳಲ್ಲಿ ಯಾತ್ರೆ ನಡೆಯಲಿದೆ ಎಂದರು. ಕಾರ್ಯಕ್ರಮದ ಸಾನ್ನಿಧ್ಯವನ್ನು ಇಲ್ಲಿಯ ವಿರಕ್ತಮಠದ ಸಿದ್ದೇಶ್ವರ ದೇವರು ವಹಿಸಿ ಕಾರ್ಯಕ್ರಮವನ್ನು ದೀಪಬೆಳಗಿಸಿ ಚಾಲನೆ ನೀಡಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ವಿದ್ವಾಂಸ ವಾಗೀಶ ಶಾಸ್ತ್ರಿ, ಬಸವ ಯಾತ್ರೆಯ ಕಾರ್ಯದರ್ಶಿ ಸುಭಾಶ್ಚಂದ್ರ ಸ್ಥಾನಿಕ್ ಮಾತನಾಡಿದರು. ಶಶಿಧರ ಸ್ವಾಮಿ ಪ್ರಾಸ್ತವಿಕವಾಗಿ ಮಾತನಾಡಿದರು.
ಅಕ್ಕನಬಳಗದ ಅಧ್ಯಕ್ಷೆ ರೂಪಾಹಾಲೇಶ್ ಅವರು ಬಸವೇಶ್ವರರ ವಚನಗಳನ್ನು ಪಠಿಸಿ ಪ್ರಾರ್ಥಿಸಿದರು.
ವೇದಿಕೆ ಮೇಲೆ ಬಸವೇಶ್ವರ ಸಹಕಾರ ಬ್ಯಾಂಕಿನ ಅಧ್ಯಕ್ಷೆ ಹೆಚ್.ಎಂ.ಗಂಗಮ್ಮ,ಪುಟ್ಟಪ್ಪ,ಮಂಜಾಚಾರ್, ಸೋಮಶೇಖರ ಗಟ್ಟಿ ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.