ಭೋಜನಶಾಲೆಗಾಗಿ ಪ್ರಸ್ತಾವನೆ ಸಲ್ಲಿಸಲು ಆದೇಶ
ಕ.ಪ್ರ.ವಾರ್ತೆ ಶಿವಮೊಗ್ಗ ಜ. 3
ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಾಂಗಣದಲ್ಲಿ ಭೋಜನ ಶಾಲೆ ಮತ್ತು ಪಾಕ ಶಾಲೆ ನಿರ್ಮಾಣದ ಸಂಬಂಧ ಪ್ರಸ್ತಾವನೆ ಕಳುಹಿಸುವಂತೆ ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ಅವರು ಶಿವಮೊಗ್ಗ ಜಿಲ್ಲಾಧಿಕಾರಿಯವರಿಗೆ ಆದೇಶ ನೀಡಿದ್ದಾರೆ.
ಶಿವಮೊಗ್ಗ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮನವಿ ಹಿನ್ನೆಲೆಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ಪಡೆದ ಬಳಿಕ ಸಚಿವರು ಈ ಆದೇಶ ನೀಡಿದರು.
ಸಭೆಯಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ರಾಜ್ಯ ಪ್ರಾಜ್ಯವಸ್ತು ನಿರ್ದೇಶನಾಲಯದ ಆಯುಕ್ತರು, ಶಿವಮೊಗ್ಗ ಜಿಲ್ಲಾಧಿಕಾರಿ ವಿಪುಲ್ಕುಮಾರ್ ಬನ್ಸಲ್, ತಹಸೀಲ್ದಾರ್ ಕೊಟ್ರಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಾಂಗಣದಲ್ಲಿ ಇದ್ದ ಭೋಜನ ಶಾಲೆ ಮತ್ತು ಪಾಕಶಾಲೆಯನ್ನು ಉಪ ಮುಖ್ಯಮಂತ್ರಿ ಈಶ್ವರಪ್ಪ ಅವರ ಅಧಿಕಾರದ ಅವಧಿಯಲ್ಲಿ ಕೆಡವಲಾಗಿತ್ತು. ಇದರ ಪುನರ್ ನಿರ್ಮಾಣಕ್ಕೆ ಪ್ರಾಚ್ಯವಸ್ತು ಕಾಯ್ದೆ ಅಡ್ಡಿ ಇತ್ತು. ಆದರೆ, ಇಲ್ಲಿ ಭೋಜನ ಶಾಲೆ ಮತ್ತು ಪಾಕಶಾಲೆ ನಿರ್ಮಿಸುವಂತೆ ಜನರಿಂದ ಒತ್ತಡ ಬಂದಿತ್ತು. ಈ ಬಗ್ಗೆ ಗಮನಹರಿಸಿದ ಶಾಸಕ ಪ್ರಸನ್ನಕುಮಾರ್ ಅವರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ಇಲ್ಲಿ ಪ್ರಸಾದ ಮಂದಿರ, ಭೋಜನ ಶಾಲೆ ಬೇಕಾಗುತ್ತದೆ. ಪ್ರತಿದಿನ ಸಾವಿರಾರು ಭಕ್ತರು ಇಲ್ಲಿಗೆ ಬರುವುದರಿಂದ ಈ ವ್ಯವಸ್ಥೆ ಅನಿವಾರ್ಯ. ಇಲ್ಲಿದ್ದ ಪ್ರಸಾದ ಮಂದಿರ ಮತ್ತು ಭೋಜನಶಾಲೆ ಕೆಡವಿ ಹಾಕಿದ್ದು, ಅದೇ ಜಾಗದಲ್ಲಿ ಪುನರ್ ನಿರ್ಮಾಣ ಮಾಡಲಾಗುತ್ತದೆಯೇ ಹೊರತು ಹೊಸದಾಗಿ ನಿರ್ಮಾಣ ವಿಸ್ತರಣೆಯಾಗುತ್ತಿಲ್ಲ ಎಂದು ಎಂದು ಶಾಸಕ ಕೆ. ಬಿ. ಪ್ರಸನ್ನಕುಮಾರ್ ಅವರು ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದರು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕ ಪ್ರಸನ್ನಕುಮಾರ್ ಅವರು ಪುನಃ ಈ ಕುರಿತು ವಿವರಣೆ ನೀಡಿದರು. ನಂತರ ಸಚಿವ ಹುಕ್ಕೇರಿ ಅವರು ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯೊಂದನ್ನು ತಕ್ಷಣ ನೀಡುವಂತೆ ಸೂಚನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

