ಸಮ್ಮೇಳನಾಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಿ
ಕ.ಪ್ರ.ವಾರ್ತೆ ಸಾಗರ ಜ. 3
ಸಾಹಿತ್ಯ ಸಮ್ಮೇಳದ ಅಧ್ಯಕ್ಷರಿಗೆ ಸರ್ಕಾರ ಸಂಪುಟದರ್ಜೆ ಸ್ಥಾನಮಾನ ನೀಡಬೇಕು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು.
80ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ನಿಯೋಜಿತರಾಗಿರುವ ಡಾ.ನಾ.ಡಿಸೋಜ ದಂಪತಿಯನ್ನು ಶುಕ್ರವಾರ ಅವರ ಮನೆಯಲ್ಲಿ ಸನ್ಮಾನಿಸಿ, ಸಾಹಿತ್ಯ ಸಮ್ಮೇಳನ ಮುಗಿದ ನಂತರ ಸರ್ಕಾರ ಸಮ್ಮೇಳನದ ಅಧ್ಯಕ್ಷರನ್ನು ಮರೆತುಬಿಡುತ್ತದೆ. ಸಮ್ಮೇಳನಾಧ್ಯಕ್ಷರಿಗೆ ಇಂತಹ ಸ್ಥಿತಿ ತರಬಾರದು. ಸರ್ಕಾರ ಅವರಿಗೆ ಸಮ್ಮೇಳನದ ದಿನವೆ ಸ್ವಂತ ಕಾರು ಹಾಗೂ ಗುಮಾಸ್ತರೊಬ್ಬರನ್ನು ನೀಡಿ, ಸಚಿವ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಆಗಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಊಟದ ಹಬ್ಬವಾಗದಿರಲಿ: ಸಾಹಿತ್ಯ ಸಮ್ಮೇಳನಗಳು ಕೇವಲ ಹೋಳಿಗೆ, ಪೂರಿಯನ್ನು ಭರ್ಜರಿಯಾಗಿ ತಿನ್ನುವ ಮೂರು ದಿನದ ಹಬ್ಬದಂತಾಗಬಾರದು. ಸಮ್ಮೇಳನದಲ್ಲಿ ನಡೆಯುವ ಚರ್ಚೆಗಳು ನಿಗಧಿತ ಅವಧಿಯಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಸರ್ಕಾರ ಹೊತ್ತು ಕೊಳ್ಳಬೇಕು.
ಒಂದೊಮ್ಮೆ ಸರ್ಕಾರ ನಿಗದಿಪಡಿಸಿದ ಅವಧಿಯಲ್ಲಿ ನಿರ್ಣಯಗಳನ್ನು ಅನುಷ್ಠಾನಕ್ಕೆ ತರದಿದ್ದರೆ ಸಮ್ಮೇಳನಾಧ್ಯಕ್ಷರಾಗಿದವರು ದಿನಾಂಕದ ಗಡುವು ನೀಡಿ ಸರ್ಕಾರದ ವಿರುದ್ಧ ಹೋರಾಟಕ್ಕೂ ಸಜ್ಜಾಗಿರಬೇಕು ಎಂದರು.
ಶಾಸನಸಭೆಯಲ್ಲಿ ಇರುವವರಿಗೆ ಕನ್ನಡ ಬೇಕಾಗಿಲ್ಲ. ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸಾಂಬಾಜಿರಾವ್ ಪಾಟೀಲ್ ಕರ್ನಾಟಕದ ಶವಯಾತ್ರೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದಾಗಲೂ ನಮ್ಮ ಜನಪ್ರತಿನಿಧಿಗಳು ಚಕಾರ ಎತ್ತಲಿಲ್ಲ. ಇಂತಹ ಸ್ಥಿತಿಯಲ್ಲಿ ಸಮ್ಮೇಳನದ ಮೂಲಕ ನಾಡುನುಡಿಗೆ ಹೊಸರೂಪ ಕೊಡುವ ಕೆಲಸವಾಗಬೇಕು ಎಂದರು.
ಸರ್ಕಾರದ ಆಸ್ತಿ: 80 ವರ್ಷ ದಾಟಿದ ಕವಿಗಳು ಹಾಗೂ ಸಾಹಿತಿಗಳನ್ನು ಸರ್ಕಾರದ ಆಸ್ತಿ ಎಂದು ಘೋಷಿಸಬೇಕು. ಅವರಿಗೆ ಅಗತ್ಯವಾದ ಸೌಲಭ್ಯವನ್ನು ನೀಡುವ ಕುರಿತು ಬಜೆಟ್ಟಿನಲ್ಲಿ ಹಣವನ್ನು ಮೀಸಲಿಡಬೇಕು. ಇಂತಹ ವಿಷಯಗಳ ಬಗ್ಗೆ ಸಮ್ಮೇಳನ ಬೆಳಕು ಚೆಲ್ಲಿದಾಗ ಅದು ಸಾರ್ಥಕವಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

