ಶಿವಮೊಗ್ಗ

ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಿ

Published On :

ಸಾಗರ: ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಯಿಂದ ಸಿಗುವ ಮಾನಸಿಕ ನೆಮ್ಮದಿ ಹಣ, ಸಂಪತ್ತಿನಿಂದ ಸಿಗುವುದಿಲ್ಲ ಎಂದು ಉಪವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ ಹೇಳಿದರು. ಇಲ್ಲಿನ ಸೇವಾ ಸಾಗರ ಶಾಲೆಯ ಅಜಿತ ಸಭಾಭವನದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಾಲಭವನ ಸೊಸೈಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಕ್ಕಳ ನಾಟಕೋತ್ಸವವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ರಂಗಭೂಮಿ ಮಕ್ಕಳನ್ನು ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಹೆಚ್ಚು ಪ್ರಬುದ್ಧಗೊಳಿಸುತ್ತದೆ. ಓದಿನಲ್ಲಿ ಏಕಾಗ್ರತೆ ಹಾಗೂ ಸಂಸ್ಕಾರವನ್ನು ನೀಡುವ ಇಂತಹ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೊಳ್ಳುವಂತೆ ಸೂಕ್ತ ಸಂದರ್ಭದಲ್ಲಿ ಪ್ರೋತ್ಸಾಹ ನೀಡಬೇಕು. ಮಕ್ಕಳ ಕಲಿಕೆಯ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ರಂಗಭೂಮಿ ಹೆಚ್ಚು ಸೂಕ್ತ ಎಂದು ಅಭಿಪ್ರಾಯಪಟ್ಟರು. ಸೇವಾಸಾಗರ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಎನ್.ನಾರಾಯಣಮೂರ್ತಿ ಮಾತನಾಡಿದರು.  ಪತ್ರಕರ್ತರ ಸಂಘದ ಅಧ್ಯಕ್ಷ ಹಿತಕರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಜಿ. ಜೋಯಪ್ಪ, ರಂಗಕಮರ್ ಸಿ.ಟಿ. ಬ್ರಹ್ಮಚಾರ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.