ಶಿವಮೊಗ್ಗ

ಸಂಸ್ಕಾರಯುತ ಶಿಕ್ಷಣ ಅವಶ್ಯ

Published On :

ಸಾಗರ: ಸಮಾಜಘಾತುಕ ಮನಸ್ಥಿತಿ ಹೆಚ್ಚುತ್ತಿದ್ದು ಇದನ್ನು ತಪ್ಪಿಸಲು ಶಾಲೆಯಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆಯುವಂತಾಗಬೇಕು ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಮಾರುತಿ ಗುರೂಜಿ ಹೇಳಿದರು. ಇಲ್ಲಿನ ವನಶ್ರೀ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿರುವ 3 ದಿನಗಳ ಸಾಗರೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿ, ನಮ್ಮ ಶಾಲೆಗಳು ಒಳ್ಳೆಯ ಸಂಸ್ಕಾರ ನೀಡುವ ಕೇಂದ್ರಗಳಾಗಿ ಬೆಳೆಯಬೇಕು ಎಂದು ಆಶಿಸಿದರು. ನಮ್ಮ ನಡುವೆ ನಮಗೆ ಆದರ್ಶವಾಗುವ ಅನೇಕ ಗ್ರಂಥಗಳು, ಆದರ್ಶ ವ್ಯಕ್ತಿಗಳು ಇದ್ದಾರೆ. ಅವುಗಳ ಆಯ್ಕೆಯನ್ನು ಮಕ್ಕಳು ಸೂಕ್ತವಾಗಿ ಮಾಡಿಕೊಳ್ಳುವಲ್ಲಿ ಅಗತ್ಯ ಮಾರ್ಗದರ್ಶನ ಮಾಡುವುದು ಶಾಲೆಗಳ ಕೆಲಸ ಎಂದರು. ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ಶ್ರೀಶಂಕರಭಾರತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಸತ್ಪ್ರಜೆಗಳ ನಿರ್ಮಾಣದಲ್ಲಿ ಅಧ್ಯಾಪಕರ ಪಾತ್ರ ಬಹುಮುಖ್ಯ. ಉತ್ತಮ ಪ್ರಜೆಗಳ ಮೂಲಕ ಉತ್ತಮ ಸಮಾಜ ನಿರ್ಮಿಸಿದ ಶ್ರೇಯಸ್ಸಿಗೆ ಶಿಕ್ಷಕ ಕಾರಣನಾಗುತ್ತಾನೆ ಎಂದರು.  ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ರಾಮಣ್ಣ ಮಾತನಾಡಿದರು. ಸಂಸ್ಥೆಯ ಸಂಸ್ಥಾಪಕ ಹೆಚ್.ಪಿ. ಮಂಜಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.