ಉದ್ಘಾಟನೆ...
ತರೀಕೆರೆಯಲ್ಲಿ ಬ್ರಾಹ್ಮಣ ಸೇವಾ ಸಮಿತಿ ಏರ್ಪಡಿಸಿದ್ದ ಸುಬ್ರಹ್ಮಣ್ಯೇಶ್ವರಸ್ವಾಮಿ ರಥೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ವೈ.ಎಸ್.ವಿ. ದತ್ತ ನೆರವೇರಿಸಿದರು. ಸಮಿತಿ ಅಧ್ಯಕ್ಷ ಎ.ವಿ.ನಾಗಭೂಷಣ್, ಉಪಾಧ್ಯಕ್ಷ ಎಚ್.ಸಿ.ಗೋಪಾಲಕೃಷ್ಣ, ಗಮಕಿ ರಾಜಾರಾಂ ಮತ್ತಿತರರು ಇದ್ದಾರೆ.
ಭಗವದ್ಗೀತೆ ಅರ್ಥಮಾಡಿಕೊಳ್ಳಿ
ಶಿವಮೊಗ್ಗ: ಸಮಾಜದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಭಗವದ್ಗೀತೆಯಲ್ಲಿದೆ. ಅದನ್ನು ವಕೀಲರು, ನ್ಯಾಯಾಧೀಶರು, ಜನಸಾಮಾನ್ಯರು ಓದಿ ಅರ್ಥ ಮಾಡಿಕೊಂಡಾಗ ಪ್ರಪಂಚದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತವೆ ಎಂದು ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನುಡಿದರು. ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಿದ್ದ ಶ್ರೀಮದ್ ಭಗವದ್ಗೀತಾ ಅಭಿಯಾನ ಪುನಶ್ಚೇತನ ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಮಾತನಾಡಿ, ಶ್ರೀಭಗವದ್ಗೀತೆಗೂ ನ್ಯಾಯಾಲಯಕ್ಕೂ ತೀರಾ ಹತ್ತಿರದ ಸಂಬಂಧವಿದೆ. ತೀರಾ ಇತ್ತೀಚಿನ ವರ್ಷಗಳವರೆಗೂ ನ್ಯಾಯಾಲಯದಲ್ಲಿ ಕಕ್ಷೀದಾರರು ಭಗವದ್ಗೀತೆ ಮುಟ್ಟಿ ಪ್ರಮಾಣ ಮಾಡಿಯೇ ತಾನು ಸತ್ಯವನ್ನೇ ಹೇಳುತ್ತೇನೆ ಎಂದು ಪ್ರಮಾಣ ಮಾಡಬೇಕಾಗಿತ್ತು ಎಂದರು. ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶ ನ್ಯಾ.ಮೂ. ಅಂಗಡಿ ಶ್ರೀಗಳಿಗೆ ಫಲ-ತಾಂಬೂಲ ಸಮರ್ಪಿಸಿ ಮಾತನಾಡಿ, ಭಗವದ್ಗೀತೆ ನಿತ್ಯ ಜೀವನಕ್ಕೆ ಅತ್ಯವಶ್ಯಕ ಎಂದರು. ವಕೀಲರ ಸಂಘದ ಅಧ್ಯಕ್ಷ ಅಶೋಕ ಜಿ. ಭಟ್ ಶ್ರೀಗಳಿಗೆ ಫಲ-ತಾಂಬೂಲ ಸಮರ್ಪಿಸಿ ಸ್ವಾಗತಿಸಿದರು. ಶಿವಮೊಗ್ಗದ ಎಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

