ಶಿವಮೊಗ್ಗ

ಕಾಗೋಡು ಕ್ಷೇತ್ರದಲ್ಲಿ ಅಭಿವೃದ್ಧಿ ಹುಸಿ

Published On :

ಸಾಗರ: ವಿಧಾನಸಭಾಧ್ಯಕ್ಷರೂ ಆಗಿರುವ ಶಾಸಕ ಕಾಗೋಡು ತಿಮ್ಮಪ್ಪ ಅವರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತೀವ್ರ ಹಿನ್ನಡೆಯಾಗಿದೆ. ಕ್ಷೇತ್ರದ ಜನರ ಬಹುನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಚುನಾವಣೆಯ ಸಂದರ್ಭ ಕಾಗೋಡು ತಿಮ್ಮಪ್ಪ ಅವರು ಫಲಾನುಭವಿಗಳಿಗೆ ಬಗರ್‌ಹುಕುಂ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರನ್ನು ಒಕ್ಕಲೆಬ್ಬಿಸುವುದು, ಒತ್ತುವರಿ ತೆರವುಗೊಳಿಸುವ ಕೆಲಸ ಮಾಡುವ ಮೂಲಕ ರೈತರನ್ನು ಮೋಸ ಮಾಡುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಗುರುತಿಸಲಾಗಿದ್ದ 450 ಫಲಾನುಭವಿಗಳಿಗೂ ಇವರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಹಣ ಮಂಜೂರು ಮಾಡದ ಕಾಗೋಡು:  ಆಶ್ರಯ ಮನೆಗಳನ್ನು ಮಂಜೂರು ಮಾಡುವ ಕೆಲಸ ನಡೆದಿಲ್ಲ. ಸರ್ಕಾರಿ ಪದವಿ ಕಾಲೇಜನ್ನು ಮಂಜೂರು ಮಾಡಿ ಆರಂಭಿಸಿದ್ದು ಬಿಟ್ಟರೆ ಇನ್ಯಾವ ಕೆಲಸಗಳೂ ನಡೆದಿಲ್ಲ. ಸರ್ಕಾರದಿಂದ ಯಾವ ಅನುದಾನವನ್ನು ಕ್ಷೇತ್ರಕ್ಕೆ ತಂದಿಲ್ಲ. ತಮ್ಮ ಅವಧಿಯಲ್ಲಿ ಮಂಜೂರಾಗಿದ್ದ ಶರಾವತಿ ಹಿನ್ನೀರಿನಿಂದ ಪಟ್ಟಣಕ್ಕೆ ಕುಡಿಯುವ ನೀರು ತರುವ ಕಾಮಗಾರಿ ಹಾಗೂ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆಯೇ ಹೊರತು ಯಾವ ಹೊಸ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.



ಸಂಕ್ರಾತಿ ನಂತರ ರಾಜಕೀಯತೀರ್ಮಾನ
ಸಂಕ್ರಾಂತಿ ನಂತರ ರಾಜಕೀಯವಾಗಿ ಹೊಸ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ ಬೇಳೂರು ಯಾವ ಪಕ್ಷಕ್ಕೆ ಹೋಗಬೇಕು ಎನ್ನುವುದು ಇನ್ನು ಅಂತಿಮವಾಗಿಲ್ಲ. ಪ್ರಾದೇಶಿಕ ಪಕ್ಷಗಳಿಗಿಂತ ರಾಷ್ಟ್ರೀಯ ಪಕ್ಷವೆ ಸೂಕ್ತ. ಆದ್ದರಿಂದ ರಾಷ್ಟ್ರೀಯ ಪಕ್ಷವನ್ನು ಸೇರುವ ಸಿದ್ಧತೆಯಲ್ಲಿದ್ದೇನೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.