ಶಿವಮೊಗ್ಗ

ಗಿರಿರಾಜ ಕೋಳಿ ತಳಿ ವರದಾನ

Published On :

ಸಾಗರ:  ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆವಿಷ್ಕರಿಸಿದ ಗಿರಿರಾಜ ಕೋಳಿ ತಳಿಯು ಹಿತ್ತಲ ಕೋಳಿ ಸಾಕುವವರಿಗೆ ವರದಾನ ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಹರೀಶ್ ಗಂಟೆ ಹೇಳಿದರು. ಇಲ್ಲಿನ ಪಶುಪಾಲನಾ ಇಲಾಖೆ ಹಮ್ಮಿಕೊಂಡಿದ್ದ ಕೇಂದ್ರ ಪುರಸ್ಕೃತ ಗ್ರಾಮೀಣ ಹಿತ್ತಲ ಕೋಳಿ ಅಭಿವೃದ್ಧಿ ಯೋಜನೆಯಡಿ ತಾಲೂಕಿನ ವಿವಿಧ ಫಲಾನುಭವಿಗಳಿಗೆ ಗಿರಿರಾಜ ಕೋಳಿಮರಿಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಹಾಯಕ ನಿರ್ದೇಶಕ ಡಾ.ಕಲ್ಲಪ್ಪ ಮಾತನಾಡಿ, ಸದರಿ ಯೋಜನೆಯಡಿ ಗ್ರಾಮ ಪಂಚಾಯ್ತಿಗಳಿಂದ ಆಯ್ಕೆಗೊಂಡ 128 ಫಲಾನುಭವಿಗಳಿಗೆ 6 ವಾರಗಳ ತಲಾ 12 ಕೋಳಿ ಮರಿಗಳನ್ನು ವಿತರಿಸಲಾಗಿದೆ. ಮಲೆನಾಡಿನ ವಾತಾವರಣಕ್ಕೆ ಸೂಕ್ತವಾದ ಈ ತಳಿಗಳನ್ನು ಯಾವುದೇ ಸಂಕಷ್ಟಗಳಿಲ್ಲದೆ ಸಾಕಬಹುದು. ಸಲಹೆ ಸೂಚನೆ ಅಗತ್ಯವಾಗಿದ್ದರೆ ಇಲಾಖೆಯ ವೈದ್ಯರು ಸದಾ ಜನರಿಗೆ ಲಭ್ಯರಿರುತಾರೆ ಎಂದು ತಿಳಿಸಿದರು. ಸಮಾರಂಭದಲ್ಲಿ ಡಾ. ಎನ್.ಎಚ್. ಶ್ರೀಪಾದರಾವ್, ಡಾ.ನಂದಕುಮಾರ್ ಪೈ, ಡಾ.ಮೋಹನ ಹಾಗೂ ಪಶು ವೈದ್ಯಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.