ಶಿವಮೊಗ್ಗ

ಬೇಡಿಕೆ ಈಡೇರಿಕೆಗೆ ಆಗ್ರಹ

Published On :

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಅಕ್ಷರ  ದಾಸೋಹ ಸಿಬ್ಬಂದಿ ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಸೈನ್ಸ್, ಮೈದಾನದಿಂದ ನಗರದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ, ಡಿಸಿ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಅರ್ಪಿಸಿದರು. ಬೆಲೆ ಏರಿಕೆ ದಿನಗಳಲ್ಲಿ ಜೀವನ ಸಾಗಿಸುವುದು ದುಸ್ತರ. ಇಂತಹ ಸಂದರ್ಭದಲ್ಲಿ ಕನಿಷ್ಠ ವೇತನವೂ ಇಲ್ಲದಿರುವುದರಿಂದ ಕುಟುಂಬ ನಿರ್ವಹಣೆ ಕಷ್ಟಕರವಾಗುತ್ತಿದೆ. ನರೇಗಾ ಯೋಜನೆಯಡಿ ದಿನಗೂಲಿ ಸಿಬ್ಬಂದಿಗೆ 180 ನೀಡಲಾಗುತ್ತಿದೆ. ಆದರೆ, ಬಿಸಿಯೂಟ ನೌಕರರಿಗೆ ಅಷ್ಟು ವೇತನವೂ ಸಿಗುತ್ತಿಲ್ಲ. ಜೊತೆಗೆ ಸೇವಾಭದ್ರತೆ ಇಲ್ಲ, ಪಿಂಚಣಿ, ಇಎಸ್‌ಐ ಸೇವೆ ಕೂಡ ಇಲ್ಲ ಎಂದು ದೂರಿದರು. ಕನಿಷ್ಠ ವೇತನ ನಿಗದಿಪಡಿಸಬೇಕು, ಖಾಯಂ ನೌಕರರೆಂದು ಪರಿಗಣಿಸಿ ಪಿಂಚಣಿ, ಇಎಸ್‌ಐ, ಪಿಎಫರ್ ಯೋಜನೆ ಜಾರಿಗೊಳಿಸಬೇಕು, ಹಾಲಿ ಇರುವ ಅಪಘಾತ ಪರಿಹಾರ ಮೊತ್ತವನ್ನು ಕನಿಷ್ಠ ಮೂರು ಲಕ್ಷ ರು.ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿನೋದ, ನೇತ್ರ, ಶರಾವತಿ, ಇಂದ್ರಮ್ಮ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.