ಸೊರಬದಲ್ಲಿ ಕೃಷಿ ಉತ್ಸವ-2014
ಸೊರಬ: ಸರಿಯಾಗಿ ಮಳೆ ಬೆಳೆ ಆಗದೇ ಇದ್ದಲ್ಲಿ ಸ್ವಸಹಾಯ ಸಂಘಗಳಿಂದ ಪಡೆದುಕೊಂಡ ಸಾಲ ಮರುಪಾವತಿ ಸಾಧ್ಯವಾಗುವುದಿಲ್ಲ. ಹೀಗಾದಾಗ ರೈತ ಆತ್ಮಹತ್ಯೆಗೆ ಮುಂದಾಗುತ್ತಾನೆ. ಇದನ್ನು ತಡೆಗಟ್ಟಲು ಸರ್ಕಾರಕ್ಕೆ ಯೋಜನೆಗಳ ಮೂಲಕ ಮಾಹಿತಿ ನೀಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೆಗೆ ಪಾತ್ರವಾಗಿದೆ ಎಂದು ವಿರೋಧಪಕ್ಷದ ಸಚೇತಕ ಮಧು ಬಂಗಾರಪ್ಪ ತಿಳಿಸಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಕೃಷಿ ಉತ್ಸವ 2014ರ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆಯ ಅಧಿಕಾರಿ ಸುಧೀರ್ ಬಂಟ್ವಾಳ ಮಾತನಾಡಿ, ಬಡತನ ರೇಖೆಗಿಂತ ಕೆಳಗಿರುವ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸದಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನವನ್ನು ಸೊರಬ ಪಡೆದುಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.ಮುಖ್ಯ ಅತಿಥಿ ಯೋಜನಾಧಿಕಾರಿ ಚಂದ್ರಶೇಖರ ಮಾತನಾಡಿದರು. ಉದ್ಘಾಟನೆಯನ್ನು ತಾಲೂಕಿನ ರೈತ ಬಂಧುಗಳು ನೆರವೇರಿಸಿದ್ದು ಸಂದರ್ಭೋಚಿತವಾಗಿತ್ತು. ಯೋಜನಾಧಿಕಾರಿ ಎಂ.ಸತೀಶ್ ವಾರ್ಷಿಕ ವರದಿ ವಾಚಿಸಿದರು. ಪ.ಪಂ. ಸದಸ್ಯರಾದ ಮಂಚಿ ಹನುಮಂತಪ್ಪ, ಡಿ.ಆರ್. ಶ್ರೀಧರ್, ಮಹೇಶ್ ಗೌಳಿ, ಪ್ರಶಾಂತ ಮೇಸ್ತ್ರಿ, ಎಂ.ಡಿ. ಉಮೇಶ್, ರಂಜನಿ, ತಾ.ಪಂ. ಅಧ್ಯಕ್ಷ ಎಚ್.ಎಂ. ಬಸವಲಿಂಗಪ್ಪ, ಉಪಾಧ್ಯಕ್ಷೆ ನೀಲಮ್ಮ ಸುರೇಶ್, ಸದಸ್ಯರಾದ ಜಯಶೀಲಪ್ಪ, ವೀರಭದ್ರಗೌಡ ಮೊದಲಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

