ಶಿವಮೊಗ್ಗ

ರಾಷ್ಟ್ರದ ಹಿತದೃಷ್ಟಿಯಿಂದ ಬಿಎಸ್‌ವೈ ಸ್ಪರ್ಧೆ ಅಗತ್ಯ

Published On :

ಸಾಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಯಡಿಯೂರಪ್ಪ ಅವರಿಗೆ ಸ್ಪರ್ಧಿಸಲು ಬಿಜೆಪಿ ಅನುವು ಮಾಡಿಕೊಡಬೇಕು. ರಾಷ್ಟ್ರ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಯಡಿಯೂರಪ್ಪ ಸ್ಪರ್ಧಿಸುವುದು ಅಗತ್ಯವಾಗಿದೆ. ಯಡಿಯೂರಪ್ಪ ಚುನಾವಣೆ ಕಣಕ್ಕೆ ಇಳಿಯುವುದಾದರೆ ನಮ್ಮ ಬೆಂಬಲ ಇದೆ ಎಂದು ಜಿಪಂ ಮಾಜಿ ಸದಸ್ಯ ಬಿ.ಆರ್. ಜಯಂತ್ ಹೇಳಿದರು.
ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಸೋಮವಾರ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಳಿಸುವ ಸಂಬಂಧ ಕರೆಯಲಾಗಿದ್ದ ತಮ್ಮ ಆಪ್ತರ ಹಾಗೂ ಅಭಿಮಾನಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮಿತಿಮೀರಿದ ಭ್ರಷ್ಟಾಚಾರ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ನೇತೃತ್ವದ ಯುಪಿಎ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಅಗತ್ಯವಿದೆ. ದೇಶದ ಜನರು ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯಿಂದ ಮಾತ್ರ ದೇಶಕ್ಕೆ ಪರ್ಯಾಯ ನಾಯಕತ್ವ ನೀಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೂರಕ ನಿರ್ಧಾರವನ್ನು ಕೈಗೊಂಡಿದ್ದಾರೆ. ಅದಕ್ಕೆ ಈ ಸಭೆಯ ಮೂಲಕ ನಮ್ಮೆಲ್ಲರ ಬೆಂಬಲ ವ್ಯಕ್ತಪಡಿಸುತ್ತಿದ್ದೇವೆ ಜೊತೆಗೆ ಯಡಿಯೂರಪ್ಪನವರೆ ಅಭ್ಯರ್ಥಿಯಾಗಬೇಕು ಎಂದು ನಾವು ಸಭೆ ಮೂಲಕ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.
ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ ವಿಭಜನೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೇ ಹೊರತು ಸ್ವಯಂಶಕ್ತಿಯಿಂದ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ಸಿಗೆ ಸಾಧ್ಯವಿಲ್ಲ. ಯಡಿಯೂರಪ್ಪನವರ ಅವಧಿಯಲ್ಲಿ ಆದ ಅಭಿವೃದ್ಧಿ ಕಾಂಗ್ರೆಸ್ ಸರ್ಕಾರದಿಂದ ಖಂಡಿತಾ ಸಾಧ್ಯವಿಲ್ಲ. ಆದ್ದರಿಂದ ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ತುಂಬುವುದು ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಚ್. ನಾಗರಾಜ್ ಗೌಡ, ನಾಗರತ್ನಮ್ಮ, ಎಚ್.ಎಂ. ಬಸವರಾಜ ಗೌಡ, ಸೋಮಶೇಖರ ವೀರಾಪುರ, ಎಚ್. ಹಸನಬ್ಬ, ಎಲ್.ವಿ. ಅಕ್ಷರ, ಸೈಯದ್ ಆಸಿಫ್, ವಿಜಯಕುಮಾರ್ ವಿ.ಕೆ., ಸುರೇಶ ಮೇಸ್ತ್ರಿ ಮೊದಲಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.