ಕಾಲೇಜಿಗೆ ಮೂಲ ಸೌಕರ್ಯ ಕೊರತೆ
ಆಯನೂರು: ಗ್ರಾಮೀಣ ಭಾಗದಲ್ಲಿ ಉತ್ತಮ ಫಲಿತಾಂಶವನ್ನು ತರುತ್ತಿರುವ ಆಯನೂರು ಕಾಲೇಜು ಸುತ್ತ-ಮುತ್ತಲಿನಲ್ಲಿಯೇ ಒಳ್ಳೆಯ ಪರಿಸರವನ್ನು ಹೊಂದಿದ್ದು ಕಲಿಕೆಗೆ ಉತ್ತಮ ವಾತಾವರಣದಿಂದ ಕೂಡಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು.
ಅವರು ಆಯನೂರಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಧಿಗಳು ಒಳ್ಳೆಯ ಗುಣಾತ್ಮಕ ಶಿಕ್ಷಣವನ್ನು ಪಡೆದು ದೇಶ ಹಾಗೂ ಜೀವನವನ್ನು ಉತ್ತಮಪಡಿಸಿಗೊಳ್ಳುವಂತೆ ಕಿವಿಮಾತು ಹೇಳಿದರು.
ಸೌಕರ್ಯಗಳ ಕೊರತೆ: ಪ್ರಾಂಶುಪಾಲ ಜಯರಾಂ, ಈ ಕಾಲೇಜು ಉತ್ತಮ ಪಲಿತಾಂಶ ನೀಡುತ್ತಿದ್ದರು ಸಹ ಹಲವಾರು ಸಮಸ್ಯೆಗಳಿಂದ ಕೂಡಿದೆ. ಸಂಖ್ಯಾ ದೃಷ್ಟಿಯಿಂದ ಕೊಠಡಿಗಳು ಹಾಗೂ ಮಹಿಳಾ ಶಿಕ್ಷಕಿಯರು ಮತ್ತು ಹೆಣ್ಣುಮಕ್ಕಳ ಹಿತದೃಷ್ಟಿಯಿಂದ ಶೌಚಾಲಯದ ವ್ಯವಸ್ಥೆ ಇಲ್ಲ. ಕಾಂಪೌಂಡು ಗೇಟುಗಳಿಲ್ಲದೆ ಇರುವುದರಿಂದ ಕಾಲೇಜು ಆವರಣ ಪುಂಡ ಪೋಕರಿಗಳ ತಾಣವಾಗಿ ಮಾರ್ಪಡುತ್ತಿದೆ ಆದಷ್ಟು ಬೇಗನೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಆಗಬೇಕಿದೆ ಎಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಭಿವೃಧ್ದಿ ಸಮಿತಿಯ ಉಪಾಧ್ಯಕ್ಷ ಹೆಚ್.ಡಿ. ಲೋಕೇಶ್ವರಪ್ಪ, ಶಾಸಕರೊಂದಿಗೆ ಮಾತನಾಡಿ ಶೀಘ್ರದಲ್ಲಿಯೇ ಶೌಚಾಲಯದ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಪ್ರೇಮಾ ಸುಧಾಕರ್, ಗ್ರಾ.ಪಂ. ಅಧ್ಯಕ್ಷೆ ಭಾಗ್ಯ ನರಸಿಂಹ, ತಾ.ಪಂ. ಸದಸ್ಯೆ ದೇವಿಭಾಯಿ ಧರ್ಮನಾಯ್ಕ, ಕ.ರಾ.ಸ.ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಕುಮಾರ್, ಉಪ ಪ್ರಾಂಶುಪಾಲ ರಾಜಶೇಖರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕರಡಿ ಕೃಷ್ಣಮೂರ್ತಿ, ಧನಪತಿ ನಾಯ್ಕ, ಮಹಮದ್ ರಫೀಕ್, ನಾರಾಯಣ ಗೌಡರು ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರ ಹಾಗೂ ಕ್ರೀಡೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಹಾಗೂ ಕೊನೆಯಲ್ಲಿ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಪಾನ್ಯಾಸಕರಾದ ಬಸವರಾಜಪ್ಪ ಸ್ವಾಗತಿಸಿದರು. ಉಪನ್ಯಾಸಕ ನರಸಿಂಹಪ್ಪ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

