ಶಿವಮೊಗ್ಗ

ಇಸ್ಪೀಟ್ ಆಡುತ್ತಿದ್ದ ನಾಲ್ವರ ಬಂಧನ

Published On :

ಭದ್ರಾವತಿ:   ಭದ್ರಾ ಕಾಲೋನಿಯ ಚಾನಲ್ ಏರಿಯ ಮೇಲೆ ಇಸ್ಪೀಟ್ ಜೂಜಾಟದಲ್ಲಿ ನಿರತರಾಗಿದ್ದ ಉಮೇಶ ಮತ್ತಿತರ ನಾಲ್ವರನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿ ಅವರಿಂದ 2140 ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಪಟ್ಟಣದ ರೇಲ್ವೆ ನಿಲ್ದಾಣದ ಬಳಿ ಜೂಜಾಟದಲ್ಲಿ ತೊಡಗಿದ್ದ ಮಲ್ಲೇಶಿ ಮತ್ತೀರ್ವರ ಮೇಲೆ ಶಿವಮೊಗ್ಗ ಡಿಸಿಐಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 4470 ವಶಪಡಿಸಿಕೊಂಡಿದ್ದಾರೆ. ಭದ್ರಾವತಿ ಹಳೇನಗರ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಅದೇ ರೀತಿ ಶಿವಮೊಗ್ಗ ಡಿಸಿಐಬಿ ಪೊಲೀಸರು ಪಟ್ಟಣದ ಚಾಮೇಗೌಡ ಲೈನ್‌ನಲ್ಲಿರುವ ವಕೀಲ ಅಶೋಕ ಅವರ ಕಟ್ಟಡದ ಮೇಲೆ ಓ.ಸಿ ಜೂಜಾಟದಲ್ಲಿ ತೊಡಗಿದ್ದ ಅಮೃತ ಎಂಬವರನ್ನು ಬಂಧಿಸಿ ಆರೋಪಿಯಿಂದ 42080 ವಶಪಡಿಸಿಕೊಂಡಿದ್ದಾರೆ.
ಭದ್ರಾವತಿ ಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.