ಶಿವಮೊಗ್ಗ

ಜನರ ಕತ್ತು ಹಿಸುಕುತ್ತಿರುವ ಕೇಂದ್ರ

Published On :

ಕ.ಪ್ರ.ವಾರ್ತೆ, ಹೊಸನಗರ, ಜ. 8
ಕೇಂದ್ರ ಸರ್ಕಾರದ ಅನಿಲ ದರ ಏರಿಕೆ ಮತ್ತು ಆಟೋಗಳ ಅನಿಲ ದರ ಏರಿಕೆ ಕ್ರಮ ಖಂಡಿಸಿ ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಪದೇ ಪದೇ ಅನಿಲ ದರ ಏರಿಕೆ ಮಾಡುತ್ತಲೇ ಇದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ಕಷ್ಟವಾಗಿದೆ. ಬಡವರು, ಮಧ್ಯಮ ವರ್ಗದವರ ಸಂಕಷ್ಟ ಅರಿಯದ ಕೇಂದ್ರ ಸರ್ಕಾರ ಜನರ ನೆಮ್ಮದಿ ಹಾಳು ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.
ದೇಶದಲ್ಲಿ ಲಕ್ಷಾಂತರ ಜನರು ಆಟೋ ಓಡಿಸಿಕೊಂಡು ಜೀವನ ಸಾಗಿಸುವರಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರ ಆಟೋ ಅನಿಲ ದರವನ್ನು ಮನ ಬಂದಂತೆ ಏರಿಸಿ ಆದೇಶ ಹೊರಡಿಸಿದ ಬೆನ್ನಲ್ಲೆ ಆಟೋ ಮಾಲೀಕರು ಆತಂಕಕ್ಕೆ ಬಿದ್ದು ತಮ್ಮ ಆಟೋವನ್ನು ಮಾರುವ ಸಾಹಸಕ್ಕೆ ಕೈಹಾಕಿದ್ದಾರೆ. ಅವರ ಸಂಕಷ್ಟಕ್ಕೆ ಕೇಂದ್ರ ಕೂಡಲೇ ನರವಾಗಬೇಕಿದೆ ಎಂದು ಆಗ್ರಹಿಸಿದರು.
ಕೇಂದ್ರದ ಅಸಮರ್ಪಕ ಆರ್ಥಿಕ ನೀತಿ, ಹಣದುಬ್ಬರ ತಡೆಯುವಲ್ಲಿ ಸತತ ವೈಫಲ್ಯ, ನಾಗರಿಕ ನೀತಿಯಲ್ಲಿನ ದೋಷಗಳಿಂದಾಗಿ ಜನರ ಬದುಕು ಮೂರಾಬಟ್ಟೆಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರದ ಯುಪಿಎ ಸರ್ಕಾರ ಭಾರಿ ಪ್ರಮಾಣ ಹಿನ್ನೆಡೆ ಸಾಧಿಸಿದೆ. ಇದರ ನೇರ ಪರಿಣಾಮ ಇಲ್ಲಿನ ಜನತೆಗೆ ತಟ್ಟುತ್ತಿದೆ ಎಂದರಲ್ಲದೆ ಈ ಕೂಡಲೇ ಅನಿಲ ಬೆಲೆ ಹಿಂಪಡೆಯದಿದ್ದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಉಗ್ರ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ತಾ. ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಂತಿ ಭಾಸ್ಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪದಾಧಿಕಾರಿಗಳಾದ ಕುಸುಮಾವತಿ, ಶಾಲಿನಿ ಜೋಗಿ, ಪದ್ಮಾ ಸುರೇಶ್, ರತ್ನಮ್ಮ ಗುಲಾಬಿ ಮರಿಯಪ್ಪ, ಸುಕನ್ಯಾ, ನಿರ್ಮಲಾ ಗಣೇಶ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.