ಶಿವಮೊಗ್ಗ

ಡಿಎಆರ್ ಮೈದಾನದಲ್ಲೇ ಗಣರಾಜ್ಯೋತ್ಸವ

Published On :

ಶಿವಮೊಗ್ಗ: ಜ. 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಈವರೆಗೆ ನೆಹರೂ ಮೈದಾನದಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮವು ಈ ಬಾರಿ ಡಿಎಆರ್ ಮೈದಾನಕ್ಕೆ ಸ್ಥಳಾಂತರವಾಗಿದೆ. ನೆಹರೂ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸಿರುವ ಕಾರಣ ರಾಷ್ಟ್ರೀಯ ಹಬ್ಬ, ನಾಡಹಬ್ಬಗಳು ನೆಹರೂ ಕ್ರೀಡಾಂಗಣದಿಂದ ಸ್ಥಳಾಂತರಗೊಂಡಿದ್ದವು. ಇದೀಗ ಗಣರಾಜ್ಯೋತ್ಸವ ಸರದಿ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್, ಗಣರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ವಿಶೇಷವಾಗಿ ಆಚರಿಸುವ ಹಿನ್ನೆಲೆಯಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆ ಕೈಗೊಳ್ಳುವ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು. ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ 26ರಂದು ಬೆಳಗ್ಗೆ 9ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಪೊಲೀಸ್, ಶಾಲಾ- ಕಾಲೇಜುಗಳ ಮಕ್ಕಳಿಂದ ಕವಾಯತು, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಅಲ್ಲದೆ, ಈ ಬಾರಿ ವಿಶೇಷವಾಗಿ ಪೊಲೀಸ್ ಶ್ವಾನದಳದಿಂದ ಶ್ವಾನಗಳ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಂದು ಸಂಜೆ 4ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕೆಎಸ್‌ಆರ್‌ಪಿ ಮಾಚೇನಹಳ್ಳಿ ಪೊಲೀಸ್ ತಂಡದವರಿಂದ ಪೊಲೀಸ್ ಬ್ಯಾಂಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ಹಾಗೂ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.