ಶಿವಮೊಗ್ಗ

ಬಡ, ಮಧ್ಯಮ ವರ್ಗದವರ ಬದುಕು ದುಸ್ತರ

Published On :

ಕ.ಪ್ರ.ವಾರ್ತೆ, ಭದ್ರಾವತಿ, ಜ. 8
ಕೇಂದ್ರ ಸರ್ಕಾರ ಅಡುಗೆ ಅನಿಲ ಮತ್ತು ಆಟೋಮೊಬೈಲ್ ವಾಹನಗಳಿಗೆ ಬಳಸುವ ಗ್ಯಾಸ್ ಇಂಧನದ ಬೆಲೆಯನ್ನು ಮತ್ತೊಮ್ಮೆ ಏರಿಸಿರುವುದರ ವಿರುದ್ಧ ಬಿಜೆಪಿ ಭದ್ರಾವತಿ ಘಟಕದ ಮಹಿಳಾ ಮೋರ್ಚಾ ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ನಿರ್ಮಲಾ ಪ್ರಸನ್ನಕುಮಾರ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಆರ್.ಎಸ್. ಶೋಭ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿತಾ ಮತ್ತಿತರರು ಮಾತನಾಡಿ, ಈಗಾಗಲೇ ಹಲವು ಬಾರಿ ಅನಿಲ ಬೆಲೆ ಏರಿಸಿರುವ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ಬೆಲೆಗಳನ್ನು ಏರಿಸಿ ಬಡ ಮತ್ತು ಮಧ್ಯಮವರ್ಗದವರ ಬದುಕನ್ನು ದುಸ್ತರವಾಗಿಸಿದೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರದ ಅಸಮರ್ಪಕ ಆರ್ಥಿಕ ನೀತಿ ಹಾಗೂ ನಿರಂತರವಾಗಿ ಏರಿಸಿದ ಡೀಸಲ್ ಬೆಲೆ ಏರಿಕೆಯಿಂದಾಗಿ ಮಾರುಕಟ್ಟೆಯಲ್ಲಿ ದಿನನಿತ್ಯದ ವಸ್ತುಗಳ ಬೆಲೆಗಳೂ ಏರಿಕೆಯಾಗಿದ್ದವು. ಈಗ ಮತ್ತೊಮ್ಮೆ ಅನಿಲ ಬೆಲೆ ಏರಿಸಿ ಕೇಂದ್ರ ಸರ್ಕಾರ ಮಧ್ಯಮವರ್ಗದವರ ಮೇಲೆ ಮಾಡಿದ ಮತ್ತೊಂದು ಪ್ರಹಾರವಾಗಿದೆ ಎಂದು ಟೀಕಿಸಿದರು.
ಈ ಹಿಂದೆ ಸಬ್ಸಿಡಿ ಸಿಲಿಂಡರ್‌ಗಳನ್ನು ಒಂಭತ್ತಕ್ಕೆ ಸೀಮಿತಗೊಳಿಸಿದ ಕಾರಣದಿಂದ ಮಧ್ಯಮವರ್ಗದ ಕುಟುಂಬ ನಿರ್ವಹಣೆ ದುಸ್ತರವಾಗಿತ್ತು. ಇದಲ್ಲದೆ ಸಿಲಿಂಡರ್ ಸಂಪರ್ಕ ಪಡೆಯುವುದು, ಹೆಚ್ಚುವರಿ ಸಿಲಿಂಡರ್‌ಗಾಗಿ ಪರದಾಡುವುದು ಸಾಮಾನ್ಯವಾಗಿತ್ತು. ಆದರೆ, ಇದಾವುದಕ್ಕೂ ತಲೆ ಕೆಡಿಸಿಕೊಳ್ಳದ ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆಗಳ ಏರಿಕೆಯ ಪ್ರಕ್ರಿಯೆಯನ್ನು ಮಾತ್ರ ನಿರಂತರವಾಗಿ ಮಾಡುತ್ತಿರುವುದು ಖಂಡನೀಯವೆಂದು ಮನವಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.